Friday, 16th November 2018  

Vijayavani

ಜನಾರ್ದನರೆಡ್ಡಿ ಕೇಸ್ ಬೆನ್ನಲ್ಲೇ ಡಿಕೆಶಿಗೆ ಬಂಧನ ಭೀತಿ - ಇಡಿಯಿಂದ 3ನೇ ಬಾರಿ ಇಡಿ ನೋಟಿಸ್ ಜಾರಿ        ಆ್ಯಂಬಿಂಡೆಟ್ ಪ್ರಕರಣದಲ್ಲಿ ಇಡಿ ಹೆಸರಿಗೆ ಆಕ್ಷೇಪ - ಸಿಸಿಬಿ ವಿರುದ್ಧ ಇಡಿ ಜಂಟಿ ನಿರ್ದೇಶಕ ಗರಂ        ಸಚಿವ ಸಂಪುಟ ವಿಸ್ತರಣೆಗೆ ಧನುರ್ಮಾಸದ ಎಫೆಕ್ಟ್ - ಸದ್ಯಕ್ಕಿಲ್ಲ ಆಕಾಂಕ್ಷಿಗಳಿಗೆ ಸಚಿವ ಭಾಗ್ಯ - ಕಾಂಗ್ರೆಸ್ಸಿಗರಲ್ಲಿ ಮತ್ತೆ ಅಸಮಾಧಾನ        ರಾಜ್ಯಾದ್ಯಂತ ಭುಗಿಲೆದ್ದ ರೈತರ ಹೋರಾಟದ ಕಿಚ್ಚು - ರೈತರನ್ನು ಭೇಟಿಯಾಗುವುದಾಗಿ ಹೇಳಿದ ಕುಮಾರಸ್ವಾಮಿ        ಗಾಂಧಿ ಕುಟುಂಬ ಬಿಟ್ಟು ಬೇರೆಯವರು ಎಐಸಿಸಿ 5 ಅಧ್ಯಕ್ಷರಾಗಲಿ - ಕಾಂಗ್ರೆಸ್​ಗೆ ಪ್ರಧಾನಿ ಮೋದಿಯಿಂದ ನೇರ ಸವಾಲು        ತಮಿಳುನಾಡಿನಾದ್ಯಂತ ಗಜ ಚಂಡಮಾರುತದ ಅರ್ಭಟ - 20ಕ್ಕೂ ಹೆಚ್ಚು ಮಂದಿ ದುರ್ಮರಣ - ಅಪಾರ ಆಸ್ತಿ ಪಾಸ್ತಿ, ಬೆಳೆ ನಾಶ       
Breaking News

ಆಟೋರಿಕ್ಷಾಗಳ ನಡುವೆ ಡಿಕ್ಕಿಯಾಗಿ ಇಬ್ಬರಿಗೆ ಗಾಯ

Friday, 13.07.2018, 5:00 AM       No Comments

ಮಳವಳ್ಳಿ: ತಾಲೂಕಿನ ಹುಚ್ಚನದೊಡ್ಡಿ ಸಮೀಪ ಬುಧವಾರ ತಡರಾತ್ರಿ ಎರಡು ಆಟೋರಿಕ್ಷಾಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ತಾಲೂಕಿನ ರಾಗಿ ಬೊಮ್ಮನಹಳ್ಳಿ ಗ್ರಾಮದ ಶೇಖರ್ ಹಾಗೂ ಪಟ್ಟಣದ ನಾಗೇಂದ್ರ ಗಾಯಗೊಂಡ ಚಾಲಕರು.
ಅನಾರೋಗ್ಯದಿಂದ ಬಳಲುತ್ತಿದ್ದ ರೋಗಿಯೊಬ್ಬರನ್ನು ಪಟ್ಟಣದ ಆಸ್ಪತ್ರೆಗೆ ಶೇಖರ್ ರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಆಟೋರಿಕ್ಷಾ ಡಿಕ್ಕಿ ಹೊಡೆದಿದೆ.

ಪರಿಣಾಮ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತೀವ್ರವಾಗಿ ಗಾಯಗೊಂಡ ಇಬ್ಬರು ಚಾಲಕರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ನಾಗೇಂದ್ರ ಎಂಬಾತನಿಗೆ ಕಾಲು ಮುರಿದಿರುವುದರ ಜತೆಗೆ ತಲೆ ಭಾಗಕ್ಕೆ ಪೆಟ್ಟುಬಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ನಿಮ್ಹಾನ್ಸ್‌ಗೆ ಕಳುಹಿಸಲಾಗಿದೆ ಎನ್ನಲಾಗಿದೆ.

ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

Leave a Reply

Your email address will not be published. Required fields are marked *

Back To Top