20.4 C
Bengaluru
Sunday, January 19, 2020

ಎಮಿರೇಟ್ಸ್​ ವಿಮಾನದಲ್ಲಿ 2 ಕಿಲೋ ಚಿನ್ನ ಪತ್ತೆ: ರೆವೆನ್ಯೂ ಇಂಟೆಲಿಜೆನ್ಸ್ ಬಲೆಗೆ ವಂಚಿಯೂರು ಸಬ್​ ಇನ್​ಸ್ಪೆಕ್ಟರ್​

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ತಿರುವನಂತಪುರ: ಚಿನ್ನ ಕಳ್ಳಸಾಗಣೆಗೆ ನೂರೆಂಟು ದಾರಿ. ಇದಕ್ಕೆ ಇಂಬು ನೀಡುವಂತೆ ಹಲವು ಪ್ರಕರಣಗಳು ದಾಖಲಾಗುತ್ತಲೇ ಇವೆ. ಸೋಮವಾರ ಈ ಪಟ್ಟಿಗೆ ಸೇರಿದ ಪ್ರಕರಣ ಎಮಿರೇಟ್ಸ್​ ವಿಮಾನದಲ್ಲಿ ಸಿಕ್ಕ 2 ಕಿಲೋ ಚಿನ್ನದ್ದು!

ವಿಮಾನದಲ್ಲಿ ಕಳ್ಳಸಾಗಣೆ ಮಾಡುತ್ತಾರಾದರೂ, ಈ ಸಲ ಕಂಡು ಕೊಂಡ ದಾರಿ ಭಿನ್ನವಾದುದು. ವಿಮಾನದ ಪ್ರಯಾಣಿಕ ಸೀಟಿನ ಕೆಳಗೆ 2 ಕಿಲೋ ಚಿನ್ನವನ್ನು ಅಂಟಿಸಿದಂತೆ ಪತ್ತೆಯಾಗಿತ್ತು. ಈ ವಿಮಾನ ದುಬೈನಿಂದ ಹೊರಟು ತಿರುವನಂತಪುರ ವಿಮಾನ ನಿಲ್ದಾಣಕ್ಕೆ ಸೋಮವಾರ ತಲುಪಿದ್ದು, ಸಾಮಾನ್ಯ ತಪಾಸಣೆ ವೇಳೆ ಈ ಚಿನ್ನ ಪತ್ತೆಯಾಗಿದೆ.

ಕೂಡಲೇ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್​ನ ಅಧಿಕಾರಿಗಳು ಆ ಚಿನ್ನವನ್ನು ವಶಪಡಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದರು. ಆ ಸೀಟಿನಲ್ಲಿ ಪ್ರಯಾಣಿಸಿದ ವ್ಯಕ್ತಿ ಯಾರು ಎಂಬುದನ್ನು ವಿಚಾರಿಸಿದಾಗ, ಆ ಸಾಲಿನ ಸೀಟಿನಲ್ಲಿ ಕುಳಿತಿದ್ದವರ ಪೈಕಿ ವಂಚಿಯೂರ್​ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಬ್​ ಇನ್​ಸ್ಪೆಕ್ಟರ್​ ಸಫೀರ್​ ಕೂಡ ಒಬ್ಬರು ಎಂಬುದು ಬೆಳಕಿಗೆ ಬಂದಿದೆ. ಕೂಡಲೇ ಅವರನ್ನು ವಶಕ್ಕೆ ಪಡೆದಿರುವ ರೆವೆನ್ಯೂ ಇಂಟೆಲಿಜೆನ್ಸ್​ ಅಧಿಕಾರಿಗಳು, ವಿಚಾರಣೆಗೊಳಪಡಿಸಿದ್ದಾರೆ.

ಸಫೀರ್ ಜತೆಗೆ ಒಬ್ಬ ಮಹಿಳೆಯೂ ಆಗಮಿಸಿದ್ದು, ಆಕೆಯನ್ನೂ ವಿಚಾರಣೆಗೊಳಪಡಿಸಲಾಗಿದೆ. ಅಲ್ಲದೆ, ಇತರೆ ಪ್ರಯಾಣಿಕರನ್ನೂ ವಿಚಾರಣೆಗೆ ಕರೆಸಿದ್ದಾರೆ. ಸಫೀರ್​ ರಜೆ ಮೇಲೆ ದುಬೈಗೆ ತೆರಳಿದ್ದು, ಸೋಮವಾರ ಹಿಂದಿರುಗಿದ್ದರು. ಡಿಆರ್​ಐ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...