ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ KKRTC ಬಸ್; ಇಬ್ಬರು ಮೃತ್ಯು

KKRTC Accident
Published on

ರಾಯಚೂರು: ನಿಂತಿದ್ದ ಲಾರಿಗೆ ಕೆಕೆಆರ್​ಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟು, 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ.

ರಾಮಪ್ಪ (60) ಹಾಗೂ ಸುದೀಪ್ (18) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಸಿಂಧನೂರಿನಿಂದ ಅಂಕಲಿಮಠದ ಕಡೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಬಸ್​ನಲ್ಲಿ ಒಟ್ಟು 32 ಮಂದಿ ಪ್ರಯಾಣಿಕರಿದ್ದ್ರು ಎಂದು ವರದಿಯಾಗಿದೆ.

ಅಪಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್​ ಹಾಗೂ ರಾಯಚೂರಿನ ರಿಮ್ಸ್​ಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ಸಿಂಧನೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net