ನಿಂತಿದ್ದ ಕ್ಯಾಂಟರ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು

ಹಾವೇರಿ: ನಿಂತಿದ್ದ ಕ್ಯಾಂಟರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿಯ ಬಿಸ್ನಳ್ಳಿ ಬಳಿ ನಡೆದಿದೆ.

ಕಾರು ಚಾಲಕ ನಾಗರಾಜ (38), ಇಂದೂಧರ್ ಪಾಟೀಲ (38) ಮೃತರು. ಅಪಘಾತದಲ್ಲಿ ಪ್ರವೀಣ್‌ ಎಂಬವರಿಗೆ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಚಲಿಸುತ್ತಿದ್ದ ಕಾರಿಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಮುಂದೆ ನಿಂತಿದ್ದ ಮತ್ತೊಂದು ಕ್ಯಾಂಟರ್‌ಗೆ ಕಾರು ಡಿಕ್ಕಿ ಹೊಡೆದಿದೆ.

ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. (ದಿಗ್ವಿಜಯ ನ್ಯೂಸ್)