ಲಷ್ಕರ್​ ಎ ತೊಯ್ಬಾದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಲಷ್ಕರ್​ ಎ ತೊಯ್ಬಾ ಹಾಗೂ ಭಾರತೀಯ ಭದ್ರತಾ ಪಡೆ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಜಮ್ಮು ಕಾಶ್ಮೀರದ ಬಂಡಿಪೋರ್​ನಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿ ವೇಳೆ ಉಗ್ರನೊಬ್ಬನನ್ನು ಹಜಿನ್​ ಪ್ರದೇಶದಲ್ಲಿ ವಶಕ್ಕೆ ಪಡೆದುಕೊಳ್ಳಲಾಗದೆ.

ಗಸ್ತಿನಲ್ಲಿರುವ ಸೇನಾಧಿಕಾರಿಗಳ ಮೇಲೆ ಉಗ್ರರು ಗುಂಡಿನ ದಾಳಿ ಮಾಡಿದಾಗ ಪ್ರತಿದಾಳಿಯಲ್ಲಿ ಉಗ್ರರು ಹತರಾಗಿದ್ದಾರೆ. ಇನ್ನೂ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರರನ್ನು ಮಟ್ಟ ಹಾಕಲು ಸೇನೆಯನ್ನು ಬಲವರ್ಧನೆಗೊಳಿಸಲಾಗಿದೆ. ಇಬ್ಬರು ಉಗ್ರರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ. (ಏಜೆನ್ಸೀಸ್​)