ಜಾರ್ಖಂಡ್​ನಲ್ಲಿ ನಡೆದ ಎನ್‌ಕೌಂಟರ್​ನಲ್ಲಿ ನಾಲ್ವರು ನಕ್ಸಲರ ಹತ್ಯೆ

1 Min Read
ar,y

ರಾಂಚಿ (ಜಾರ್ಖಂಡ್): ಜಾರ್ಖಂಡ್‌ನ ಪಶ್ಚಿಮ ಸಿಂಗ್‍ಭೂಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ನಡೆಸಿದ ಎನ್‍ಕೌಂಟರ್‌ಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದು, ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಇದನ್ನೂ ಓದಿ: ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಹೋಗುತ್ತದೆಯೇ ವಿನಃ ನಮ್ಮ ಜೇಬಿಗಲ್ಲ: ಸಿಎಂ ಸಿದ್ದರಾಮಯ್ಯ

ಹತ್ಯೆಯಾದ ನಾಲ್ವರು ನಕ್ಸಲರಲ್ಲಿ ಝೋನಲ್ ಕಮಾಂಡರ್, ಸಬ್ ಜೋನಲ್ ಕಮಾಂಡರ್ ಹಾಗೂ ಏರಿಯಾ ಕಮಾಂಡರ್ ಸೇರಿದ್ದಾರೆ. ಬಂಧಿತ ಇಬ್ಬರೂ ಸ್ಥಳೀಯ ನಕ್ಸಲ್ ಕಮಾಂಡರ್ ಗಳಾಗಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ತೋಂಟೊ ಮತ್ತು ಗೋಯಿಲ್ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಕೂಂಬಿಂಗ್ ಕಾರ್ಯಾಚರಣೆ ವೇಳೆ ಎನ್‍ಕೌಂಟರ್ ನಡೆದಿದೆ. ಈ ವೇಳೆ ಅಡಗಿ ಕುಳಿತಿದ್ದ ನಕ್ಸಲರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ನಾಲ್ವರು ನಕ್ಸಲರು ಬಲಿಯಾಗಿದ್ದಾರೆ. ಎನ್‍ಕೌಂಟರ್ ಬಳಿಕ ಇಬ್ಬರು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಜಾರ್ಖಂಡ್‌ನ ಪೊಲೀಸ್ ಐಜಿ ಅಮೋಲ್ ವಿ ಹೋಮ್ಕರ್, ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ನಾಲ್ವರು ಎನ್‍ಕೌಂಟರ್ ವೇಳೆ ಬಲಿಯಾಗಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಶನಿವಾರ ಮುಂಜಾನೆ, ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಅರಣ್ಯದಲ್ಲಿ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಸಾವನ್ನಪ್ಪಿದರು. ಅಲ್ಲದೆ, ಓರ್ವ ಯೋಧ ಹುತಾತ್ಮರಾಗಿದ್ದರು. ಯಶಸ್ವಿ ಕಾರ್ಯಾಚರಣೆಗಾಗಿ ಭದ್ರತಾ ಸಿಬ್ಬಂದಿಯನ್ನು ಅಭಿನಂದಿಸಿದ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ನಕ್ಸಲೀಯರ ವಿರುದ್ಧ ರಾಜ್ಯ ಸರ್ಕಾರವು ಪ್ರಬಲವಾಗಿ ಹೋರಾಡುತ್ತಿದೆ ಎಂದು ಹೇಳಿದ್ದಾರೆ.

See also  ಜಾರ್ಖಂಡ್​: ಜೆಎಂಎಂ ತೊರೆದು ಬಿಜೆಪಿ ಸೇರ್ಪಡೆಯಾದ ಹೇಮಂತ್ ಸೊರೇನ್‌ ಸೊಸೆ ಸೀತಾ ಸೊರೆನ್!

ಮೇ.13 ರಂದು ಪಶ್ಚಿಮ ಸಿಂಗ್‍ಭೂಮ್ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡ ನಂತರ ನಡೆದ ಎರಡನೇ ಎನ್‍ಕೌಂಟರ್ ಇದಾಗಿದೆ. ಮೇ 23 ರಂದು ನಡೆದ ಎನ್‍ಕೌಂಟರ್‌ನಲ್ಲಿ ನಕ್ಸಲ್ ಕಮಾಂಡರ್ ಆಗಿದ್ದ ಬುಧ್ರಾಮ್ ಮುಂಡಾ ಹತ್ಯೆಗೀಡಾಗಿದ್ದ.

Share This Article