ಬೋನಿ ಕಪೂರ್​ ಮನೆಯಲ್ಲಿ ಮತ್ತಿಬ್ಬರಿಗೆ ಕರೊನಾ ಪಾಸಿಟಿವ್​!

biney
Published on

ಇತ್ತೀಚೆಗಷ್ಟೇ ಬಾಲಿವುಡ್​ನ ಖ್ಯಾತ ನಿರ್ಮಾಪಕ ಬೋನಿ ಕಪೂರ್​ ಮನೆಯ ಕೆಲಸದವರಿಗೆ ಕರೊನಾ ಪಾಸಿಟಿವ್​ ಪತ್ತೆಯಾಗಿತ್ತು. ಅದಾದ ಬಳಿಕ ಅಧಿಕೃತ ಪ್ರಕಟಣೆ ಹೊರಡಿಸಿದ್ದ ಬೋನಿ ಕಪೂರ್​, ಮನೆ ಮತ್ತು ಮನೆಯಲ್ಲಿರುವವರ ಬಗ್ಗೆಯೂ ಹೇಳಿಕೊಂಡಿದ್ದರು. ತಮ್ಮಿಬ್ಬರು ಪುತ್ರಿಯರ ಆರೋಗ್ಯದ ಬಗ್ಗೆಯೂ ಮಾಹಿತಿ ನೀಡಿದ್ದರು. ಹೀಗಿರುವಾಗಲೇ, ಮನೆಯ ಕೆಲಸಗಾರರ ಪೈಕಿ ಮತ್ತಿಬ್ಬರಿಗೆ ಕರೊನಾ ಸೋಂಕು ಇರುವುದು ದೃಢಪಟ್ಟಿದೆ.

ಸೋಂಕು ನಿಯಂತ್ರಣಕ್ಕೆ ಮತ್ತು ಅದರ ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲ ರೀತಿಯ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡಿರುವ ಬಗ್ಗೆ ಬೋನಿ ಹೇಳಿದ್ದರು. ಇದೀಗ ಮನೆಯಲ್ಲಿ ಕೆಲಸ ಮಾಡುವ ಮತ್ತಿಬ್ಬರಲ್ಲಿ ಕರೊನಾ ಪಾಸಿಟಿವ್​ ದೃಢಪಟ್ಟಿರುವುದು ಆತಂಕಕ್ಕೀಡು ಮಾಡಿದೆ. ಸದ್ಯ ಅನಾರೋಗ್ಯಕ್ಕೀಡಾದ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಐಸೋಲೇಷನ್​ನಲ್ಲಿ ಇರಿಸಲಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net