More

    ಪ್ರತ್ಯೇಕ ಎರಡು ಪ್ರಕರಣದಲ್ಲಿ ಇಬ್ಬರು ಆತ್ಮಹತ್ಯೆ

    ಬಾಳೆಹೊನ್ನೂರು: ಹೋಬಳಿಯಲ್ಲಿ ಗುರುವಾರ ಇಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾರಿಗುಡಿ ರಸ್ತೆಯಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ವಿವಾಹಿತ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಆಸಿಫ್ (25) ಮೃತ ವಿವಾಹಿತ. ಆಸಿಫ್ ಏಳು ತಿಂಗಳ ಹಿಂದೆ ವಿವಾಹವಾಗಿದ್ದರು. ದಂಪತಿ ಆಗಾಗ ಜಗಳವಾಡುತ್ತಿದ್ದರು. ಕೌಟುಂಬಿಕ ಜಗಳದಿಂದಾಗಿ ಪತ್ನಿ ಮನೆ ತೊರೆದಿದ್ದು, ಇದರಿಂದ ಬೇಸತ್ತು ಆಸಿಫ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
    ಮತ್ತೊಂದು ಪ್ರಕರಣದಲ್ಲಿ ಬಂಡಿಹೊಳೆ ಗ್ರಾಮದಲ್ಲಿ ಮೊಬೈಲ್ ಫೋನ್‌ನಲ್ಲಿ ಸದಾ ಮಾತನಾಡುತ್ತಿರುವುದಕ್ಕೆ ವಿರೋಧಿಸಿ ತಾಯಿ ಬೈದು ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
    ಬಂಡಿಹೊಳೆ ನಿಧಿ (19) ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ಕೆಲ ದಿನಗಳಿಂದ ಮೊಬೈಲ್‌ನಲ್ಲಿ ಸದಾ ಮಾತನಾಡುತ್ತಿದ್ದಳು. ಹೀಗಾಗಿ ತಾಯಿ ಬುದ್ಧಿವಾದ ಹೇಳಿದ್ದರು. ಇದರಿಂದ ಯುವತಿ ಬೇಸರಗೊಂಡಿದ್ದಳು ಎನ್ನಲಾಗಿದೆ. ಗುರುವಾರ ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದಾಗ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಕೂಲಿ ಕೆಲಸದಿಂದ ವಾಪಸ್ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
    ಎರಡೂ ಪ್ರಕರಣ ಬಾಳೆಹೊನ್ನೂರು ಠಾಣೆಯಲ್ಲಿ ದಾಖಲಿಸಲಾಗಿದೆ. ಪಿಎಸ್‌ಐ ರವೀಶ್ ಸ್ಥಳ ಪರಿಶೀಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts