ಚಲಿಸುತ್ತಿದ್ದ ಲಾರಿಗೆ ಎರಡು ಬೈಕ್ ಗಳ ಡಿಕ್ಕಿ: ಸ್ಥಳದಲ್ಲಿ ಇಬ್ಬರು ದುರ್ಮರಣ

ವಿಜಯಪುರ: ಲಾರಿಗೆ ಎರಡು ಬೈಕ್​ಗಳು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ.

ನಗರದ ಇಟ್ಟಂಗಿಹಾಳ ರಸ್ತೆ ಬಳಿ ಚಲಿಸುತ್ತಿದ್ದ ಲಾರಿಗೆ ಇಬ್ಬರು ಬೈಕ್​​ ಸವಾರರು ಏಕಕಾಲದಲ್ಲಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಿಂಬದಿಯಲ್ಲಿ ಕುಳಿತಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದ ಶಾಪೇಟೆ ನಿವಾಸಿ ಮನ್ಸೂಕಸಾಬ್ ​​​​​​​​(60) ಮೃತಪಟ್ಟಿದ್ದು, ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರ್ಶ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *