ತಿಥಿಗೆ ಹೊರಟಿದ್ದವರು ಮಾರ್ಗಮಧ್ಯೆಯೇ ಸಾವು; ಬೈಕ್-ಕ್ಯಾಂಟರ್​ ಭೀಕರ ಅಪಘಾತದಲ್ಲಿ ಇಬ್ಬರ ದುರ್ಮರಣ

accident
Published on

ಕೋಲಾರ: ಬೈಕ್​ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಹೂಹಳ್ಳಿ ಗ್ರಾಮದ ಬಳಿ ಸಂಭವಿಸಿದ ಈ ಅಪಘಾತದಲ್ಲಿ ಹೂಹಳ್ಳಿ ಗ್ರಾಮದ ರತ್ನಮ್ಮ (42), ವೆಂಕಟರಾಮಪ್ಪ (47) ಮೃತಪಟ್ಟಿರುತ್ತಾರೆ. ಸುರೇಶ್ ಎಂಬವರು ಗಾಯಗೊಂಡಿದ್ದಾರೆ. ಅವರನ್ನು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾವಿಗೀಡಾದ ಇಬ್ಬರೂ ಬೈಕ್ ಸವಾರರು. ಅವರು ಹೂಹಳ್ಳಿಯಿಂದ ಜೊನ್ನಪಲ್ಲಿ ಗ್ರಾಮದಲ್ಲಿನ ತಿಥಿ ಕಾರ್ಯಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಶ್ರೀನಿವಾಸಪುರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net