More

    ಬೈಕ್​-ಕಾರು ಡಿಕ್ಕಿ; ಸವಾರರಿಬ್ಬರೂ ಜಸ್ಟ್​ ಮಿಸ್​; ಸಿಸಿಟಿವಿಯಲ್ಲಿ ಸೆರೆಯಾಯ್ತು ಆ ದೃಶ್ಯ..

    ಹಾವೇರಿ: ಕಾರು-ಬೈಕ್​ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದರೂ ಸವಾರರಿಬ್ಬರೂ ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಆ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲೂ ಸೆರೆಯಾಗಿದೆ.

    ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಪಿ.ಬಿ.ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ದ್ವಿಪಥ ರಸ್ತೆಯಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಲು ಬೈಕ್ ಸವಾರರು ಮುನ್ನುಗ್ಗಿದಾಗ ಅದೇ ದಿಕ್ಕಿನಲ್ಲಿ ಸಾಗಿದ ಕಾರು ಡಿಕ್ಕಿಯಾಗಿದೆ.

    ಇದನ್ನೂ ಓದಿ: ಮದ್ವೆ ಆದ್ಮೇಲೆ ಫಸ್ಟ್​ನೈಟಲ್ಲಿ ಏನ್ಮಾಡ್ತಾರೆ, ಅದ್ನೇ ಮಾಡಿದ್ದೀವಿ..: ನಟಿ ರಚಿತಾ ರಾಮ್​

    ಕಾರು​ ಡಿಕ್ಕಿಯಾದ ರಭಸಕ್ಕೆ ಬೈಕ್ ಉರುಳಿ ಬಿದ್ದಿದ್ದು ಸವಾರರಿಬ್ಬರೂ ಕೆಳಕ್ಕೆ ಬಿದ್ದು, ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳು ಹಿರೆಕೇರೂರು ನಿವಾಸಿಗಳಾಗಿದ್ದು, ಹರಿಹರದಿಂದ ವಾಪಸ್ ಊರಿಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ.

    ಈತನ ಹುಟ್ಟೇ ಗಿನ್ನೆಸ್​ ವರ್ಲ್ಡ್​ ರೆಕಾರ್ಡ್​; ತಾಯಿ ಗರ್ಭದಿಂದ ಇವನಿಗಿಂತಲೂ ಬೇಗ ಬಂದು ಇನ್ನೂ ಬದುಕಿರುವವರೇ ಇಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts