ಟ್ಯೂಷನ್​ ಮುಗಿಸಿ ಮನೆಗೆ ಮರಳುತ್ತಿದ್ದ 5-8 ವರ್ಷದ ಮಕ್ಕಳಿಬ್ಬರ ಸಾವು; ಇನ್ನು ಮೂವರಿಗೆ ಗಂಭೀರ ಗಾಯ..

Ace vehicle
ಮಕ್ಕಳಿಗೆ ಡಿಕ್ಕಿ ಹೊಡೆದಿದ್ದ ವಾಹನ
Published on

ರಾಮನಗರ: ಟ್ಯೂಷನ್​ ಮುಗಿಸಿ ರಸ್ತೆ ಬದಿಯಲ್ಲಿ ನಡೆದುಕೊಂಡು ಮನೆಗೆ ಮರಳುತ್ತಿದ್ದ ಮಕ್ಕಳಿಬ್ಬರು ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಐದು ಹಾಗೂ ಎಂಟು ವರ್ಷದ ಮಕ್ಕಳಿಬ್ಬರು ಅನ್ಯಾಯವಾಗಿ ಸಾವಿಗೀಡಾದ ಈ ಪ್ರಕರಣ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ರೋಹಿತ್ (5), ಶಾಲಿನಿ (8) ಸಾವಿಗೀಡಾದ ಮಕ್ಕಳು. ಸುಚಿತ್, ಗೌತಮಿ, ಲೇಖನ ಎಂಬ ಮೂವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.

ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಈ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಸಾವು-ನೋವುಗಳು ಉಂಟಾಗಿವೆ. ಗಾಯಗೊಂಡ ಮಕ್ಕಳನ್ನು ರಾಮನಗರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಚಿಕಿತ್ಸೆ ಫಲಿಸದೆ ಸಾವಿಗೀಡಾದರು. ಉಳಿದ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮಕ್ಕಳಿಗೆ ಗುದ್ದಿದ ಬಳಿಕವೂ ಚಾಲಕ ಗೂಡ್ಸ್​ ವಾಹನ ಸಮೇತ ಪರಾರಿಯಾಗಿದ್ದ. ಆದರೆ ಬಳಿಕ ಬೇರೆಡೆ ವಾಹನ ನಿಲ್ಲಿಸಿ ತಲೆಮರೆಸಿಕೊಂಡಿದ್ದಾನೆ. ಆಸ್ಪತ್ರೆಗೆ ಎಎಸ್​​ಪಿ ಸುರೇಶ್ ಭೇಟಿ ನೀಡಿದ್ದು, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net