

ಥಾಣೆ, ಮುಂಬೈ: ಶನಿವಾರ (ನ.25) ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಥಾಣೆಯ ಘೋಡ್ಬಂದರ್ ರಸ್ತೆಯಲ್ಲಿರುವ ಕಟ್ಟಡವೊಂದರಲ್ಲಿ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ.
ವಸತಿ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿವೆ. ಬೆಂಕಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತರಲಾಗಿದ್ದು, ಎರಡು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ನಿಂತು ಅಗ್ನಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಇದೇ ರೀತಿಯ ಮತ್ತೊಂದು ಘಟನೆ ಮುಂಬೈನಲ್ಲಿ ವರದಿಯಾಗಿದೆ.
ಇಂದು ಬೆಳಗ್ಗೆ ಮುಂಬ್ರಾ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸ್ಕ್ರ್ಯಾಪ್ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಮೂವರು ಸುಟ್ಟ ಗಾಯಗಳಿಂದ ಆಸ್ಪತ್ರೆ ಸೇರಿದ್ದಾರೆ. ಈ ಘಟನೆಯ ಫೋಟೋಗಳು ಕೂಡ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿವೆ,(ಏಜೆನ್ಸೀಸ್).