ಒಂದೇ ದಿನ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ ಸೈನ್ಸ್​ನ ಇಬ್ಬರು ವಿದ್ಯಾರ್ಥಿಗಳ ಸಾವು!

Death
Published on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇರುವ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ ಸೈನ್ಸ್​ನ ಇಬ್ಬರು ವಿದ್ಯಾರ್ಥಿಗಳು ಒಂದೇ ದಿನ ಮೃತಪಟ್ಟಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಈ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ವಿಷಯ ತಡವಾಗಿ ಹೊರಬಿದ್ದಿದೆ.

ಇಂಡಿಯನ್​ ಇನ್​​ಸ್ಟಿಟ್ಯೂಟ್​ ಆಫ್​ ಸೈನ್ಸ್​ನ ರಣಧೀರ್ ಕುಮಾರ್​ (36) ಮತ್ತು ರಾಹುಲ್ ಪ್ರತಾಪ್​ (31) ಮೃತಪಟ್ಟವರು. ಇದರಲ್ಲಿ ಒಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಮತ್ತೊಬ್ಬ ಅನಾರೋಗ್ಯಗೊಂಡು ಕೊನೆಯುಸಿರೆಳೆದಿದ್ದಾನೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐಐಎಸ್​ಸಿಯಲ್ಲಿ ರಣಧೀರ ಕುಮಾರ್​ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ರಾಹುಲ್ ಪ್ರತಾಪ್ ಎಂ.ಟೆಕ್ ವಿದ್ಯಾರ್ಥಿಯಾಗಿದ್ದ. ರಣಧೀರ ಕುಮಾರ್ ತಾನಿದ್ದ ರೂಮ್​ನಲ್ಲೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಇನ್ನು ರಾಹುಲ್ ಪ್ರತಾಪ್ ಫುಟ್​​ಬಾಲ್​ ಆಡುವಾಗ ಪಲ್ಸ್ ರೇಟ್​ ಕಡಿಮೆಯಾಗಿ ಮೃತಪಟ್ಟಿದ್ದಾನೆ. ಇಬ್ಬರೂ ವಿದ್ಯಾರ್ಥಿಗಳ ಹೆಚ್ಚಿನ ವಿವರ ಇನ್ನಷ್ಟೇ ಹೊರಬೀಳಬೇಕಿದೆ.

ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net