More

  SSLC ಪರೀಕ್ಷಾ ದಿನವೇ ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳ ದುರಂತ ಅಂತ್ಯ

  ಬೆಂಗಳೂರು: ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟರೆ, ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ  ಮಾಡಿಕೊಂಡಿದ್ದಾನೆ. ಈ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆ ದಿನವೇ ದುರಂತ ಅಂತ್ಯ ಕಂಡಿದ್ದಾರೆ.

  ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಹೋಗುತ್ತಿದ್ದ ವಿದ್ಯಾರ್ಥಿನಿ ರಸ್ತೆ ದಾಟುವ ವೇಳೆ ವಿದ್ಯಾರ್ಥಿನಿಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದ ಉಮ್ಮೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಟ್ಟಿದ್ದಾಳೆ. ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಮೃತ ದುರ್ದೈವಿ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿಸ್ದಾರೆ. 

  ಪರೀಕ್ಷಾ ದಿನವೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಪರಶುರಾಮ್ ಬಾಬು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆನಂದಪುರದ ಕೆಪಿಎಸ್​ಸಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ, ಚೆನ್ನಾಗಿಯೇ ಓದುತ್ತಿದ್ದ. ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ. ಆದ್ರೆ ಕೊನೇ ಕ್ಷಣದಲ್ಲಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಐಶ್ವರ್ಯ ರೈ ತಾಯಿ ಕೂಡಾ ಅಪ್ರತಿಮ ಚೆಲುವೆ; ಮಗಳನ್ನೇ ಮೀರಿಸುವ ಸುಂದರಿ ಐಶ್​​ ತಾಯಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts