ಭದ್ರತಾ ಪಡೆ ಗುಂಡಿನ ದಾಳಿಗೆ ಉಗ್ರರಿಬ್ಬರು ಹತ: ಓರ್ವ ಸೇನಾಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಸೊಪೋರ್​ ಪ್ರದೇಶದಲ್ಲಿ ಶುಕ್ರವಾರ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಗಡಿ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.

ಸೊಪೋರ್​ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದ್ದು, ಮೃತರಾಗಿರುವ ಉಗ್ರರು ಯಾರು? ಯಾವ ಸಂಘಟನೆ? ಎಂಬುದು ಇನ್ನೂ ಖಚಿತವಾಗಿಲ್ಲ. ದಾಳಿಯಲ್ಲಿ ಗಾಯಗೊಂಡಿರುವ ಸೇನಾಧಿಕಾರಿಯನ್ನು ಸೇನಾ ಆಸ್ಪತ್ರೆಗೆ ದಾಖಲಿಸಿದಾದರೂ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಶ್ರೀನಗರ ಮೂಲದ ರಕ್ಷಣಾ ವಕ್ತಾರ ಕರ್ನಲ್ ರಾಜೇಶ್​ ಕಾಲಿಯಾ ತಿಳಿಸಿದ್ದಾರೆ.​

ಉಗ್ರರು ಅಡಗಿರುವ ಮಾಹಿತಿ ತಿಳಿದು ಶುಕ್ರವಾರ ನಸುಕಿನಲ್ಲೇ ಭದ್ರತಾ ಪಡೆಗಳು ಉತ್ತರ ಕಾಶ್ಮೀರ ಜಿಲ್ಲೆಯ ಡಂಗಿವಾಚಾ ಸೊಪೋರ್ ಪ್ರದೇಶದ ಪಜಲ್ಪೊರಾ ಎಂಬ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಗುಂಡಿನ ದಾಳಿ ನಡೆಸಿದರು. (ಏಜೆನ್ಸೀಸ್​)