ಚಲಿಸುತ್ತಿರುವಾಗಲೇ ಹೊತ್ತಿ ಉರಿದ ದ್ವಿಚಕ್ರವಾಹನ: ಇಬ್ಬರಿಗೆ ಗಂಭೀರ ಗಾಯ

Bike
Published on

ಮಂಡ್ಯ: ಚಲಿಸುತ್ತಿರುವಾಗಲೇ ಏಕಾಏಕಿ ದ್ವಿಚಕ್ರ ವಾಹನ ಹೊತ್ತಿ ಉರಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ರಸ್ತೆಯಲ್ಲಿ ತೆರಳುತ್ತಿರುವಾಗಲೇ ದ್ವಿಚಕ್ರ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಟ್ಟ ಗಾಯದಿಂದ ನರಳುತ್ತಿದ್ದ ಮೈಸೂರಿನ ಶಿವರಾಮಯ್ಯ ಮತ್ತು ಅನಂತರಾಮು ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಮಾಮೂಲಿಯಂತೆ ರಸ್ತೆಯ ಮೇಲೆ ಬೈಕ್​ ಸವಾರರಿಬ್ಬರು ವಾಹನ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು, ಏಕಾಏಕಿ ಬೆಂಕಿ ಹೊತ್ತಿ ಉರಿದಿದೆ. ವಾಹನದಿಂದ ಇಳಿಯಲು ಅವಕಾಶ ಕೊಡದಂತೆ ಪೂರ್ತಿ ಬೆಂಕಿ ಆವರಿಸಿಕೊಂಡಿದೆ. ಇದರಿಂದ ಅಲ್ಲೇ ಸಿಲುಕಿ ನರಳುತ್ತಿದ್ದರು. ಸ್ಥಳೀಯರು ಓಡೋಡಿ ಬಂದು ಬೆಂಕಿಯಲ್ಲಿ ನರಳಾಡುತ್ತಿದ್ದ ಇಬ್ಬರನ್ನು ರಕ್ಷಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.(ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net