ರಾಕಿಂಗ್ ಸ್ಟಾರ್​​ ಬರ್ತಡೇ; ಯಶ್ ನೋಡಲು ಬರುತ್ತಿದ್ದ ಮತ್ತೊಬ್ಬ ಅಭಿಮಾನಿ ಸಾವು

yash
Published on

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೋರ್ವ ಯಶ್ ಅಭಿಮಾಣಿ ಸಾವನ್ನಪ್ಪಿದ್ದಾನೆ.

ಮೃತ ನಿಖಿಲ್​​. ಗದಗ ತಾಲೂಕಿನ ಬಿಂಕದಕಟ್ಟಿ ನಿವಾಸಿಯಾಗಿದ್ದಾನೆ. ಯಶ್​ ನೋಡಲು ಬೈಕ್​ನಲ್ಲಿ ಹಿಂಬಾಲಿಸಿ ಹೋಗಿ ಸಾವನ್ನಪ್ಪಿದ್ದಾನೆ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿ.

ಗದಗ ಜಿಲ್ಲೆ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬದ ಅಂಗವಾಗಿ ತಡರಾತ್ರಿ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮುರಳಿ, ನವೀನ್, ಹನುಮಂತ ಎಂಬ ಮೂವರು ನಿಧನರಾಗಿದ್ದು, ಇನ್ನೂಳಿದ ಮೂವರು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಈ ವಿಚಾರ ತಿಳಿದ ಯಶ್​​ ಮೃತರ ಮನೆಗೆ ಬೇಟಿ ನೀಡಿ ಸಾಂತ್ವನ ಹೇಳಿ ಯಶ್​ ವಾಪಸ್​ ಆಗುತ್ತಿದ್ದರು.

ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಗಾಯಾಳುಗಳ ಆರೋಗ್ಯ ವಿಚಾರಿಸಿದ ವಾಪಸ್ ಆಗುತ್ತಿದ್ದರು. ಈ ವೇಳೆ ಯಶ್​ ಅವರ ಮತ್ತೊರ್ವ ಅಭಿಮಾನಿ ನಿಖಿಲ್, ಯಶ್​ ಅವರು ಕಾರ್​ನಲ್ಲಿ ಬರುತ್ತಿರುವುದನ್ನು ನೋಡಿ ಹಿಂಬಾಲಿಸಿದ್ದಾನೆ. ಈ ವೇಳೆ ಪೊಲೀಸ್​ ಭದ್ರತಾ ವಾಹನಕ್ಕೆ ನಿಖಿಲ್ ಸ್ಕೂಟಿ ಡಿಕ್ಕಿ ಹೊಡೆದಿದೆ. ಈ ಅಪಘಾತ ಗದಗ ನಗರದ ತೇಜಾನಗರದಲ್ಲಿ ಈ ಘಟನೆ ನಡೆದಿದೆ.

ಕೂಡಲೇ ಆತನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ನಿಖಿಲ್‌ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಸದ್ಯ ಆಸ್ಪತ್ರೆ ಬಳಿ‌ ನಿಖಿಲ್ ಕುಟುಂಬಸ್ಥರ‌ ಆಕ್ರಂದನ ಮುಗಿಲು ಮುಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net