ಈ ಬೆಟ್ಟಕ್ಕೆ ಜ. 15, 16ರಂದು ದ್ವಿಚಕ್ರ ವಾಹನಗಳ ಪ್ರವೇಶ ನಿಷೇಧ

B R Hills
Published on

ಚಾಮರಾಜನಗರ: ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಜ.15 ಹಾಗೂ 16ರಂದು ದ್ವಿಚಕ್ರ ವಾಹನಗಳ ಮೂಲಕ ತೆರಳುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಬಿಳಿಗಿರಿರಂಗನಬೆಟ್ಟದಲ್ಲಿ ಜ.15 ರಿಂದ 18 ರವರೆಗೆ ಬಿಳಿಗಿರಿ ರಂಗನಾಥಸ್ವಾಮಿ ರಥೋತ್ಸವ ಹಾಗೂ ಚಿಕ್ಕಜಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುತ್ತದೆ.

ಅಲ್ಲದೆ ಅರಣ್ಯ ಪ್ರದೇಶದ ಕಿರಿದಾದ ರಸ್ತೆಯಲ್ಲಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳೂ ಇರುವುದರಿಂದ ದ್ವಿಚಕ್ರ ವಾಹನಗಳು ಜ.15 ಹಾಗೂ 16 ರಂದು ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net