ಬೆಂಜ್ ಕಾರ್-ಡ್ಯೂಕ್​ ಬೈಕ್​ ಡಿಕ್ಕಿ; ದ್ವಿಚಕ್ರ ವಾಹನ ಸವಾರನ ಸಾವು..

Benz
Published on

ಧಾರವಾಡ: ಬೆಂಜ್ ಕಾರು ಹಾಗೂ ಡ್ಯೂಕ್​ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾನೆ. ಧಾರವಾಡ-ಸವದತ್ತಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಧಾರವಾಡ ಹೊರವಲಯದ ಮರೇವಾಡ ಗ್ರಾಮದ ಬಳಿ ವೇಗವಾಗಿ ಹೋಗುತ್ತಿದ್ದ ಬೆಂಜ್​ ಕಾರು ಹಾಗೂ ಕೆಟಿಎಂ ಡ್ಯೂಕ್ ಬೈಕ್​ ಮುಖಾಮುಖಿ ಆಗಿವೆ. ಈ ಸಂದರ್ಭದಲ್ಲಿ ಗಂಭೀರ ಗಾಯಗೊಂಡ ಬೈಕ್​ ಸವಾರನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು ಮಾರ್ಗಮಧ್ಯೆ ಆತ ಮೃತಪಟ್ಟಿದ್ದಾನೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಮೃತಪಟ್ಟಿರುವನ ಕುರಿತ ವಿವರಗಳು ಇನ್ನಷ್ಟೇ ಲಭಿಸಬೇಕಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net