ಕರೊನಾ ಸೇನಾನಿಗಳಿಗೆ ಊಟ ಬಡಿಸಿದ್ದ ಯುವಕನನ್ನೂ ಬಿಡಲಿಲ್ಲ ಜವರಾಯ!

mandya death
Published on

ಮಂಡ್ಯ: ಕರೊನಾ ಲಾಕ್​ಡೌನ್ ಜಾರಿಯಾದ ದಿನದಿಂದ ಮೂರು ತಿಂಗಳ ಕಾಲ ಬನ್ನೂರು ಹಾಗೂ ಮಂಡ್ಯ ಗಡಿಯ ಚೆಕ್​ಪೋಸ್ಟ್ ಸಿಬ್ಬಂದಿಗೆ ಊಟ-ತಿಂಡಿ ವ್ಯವಸ್ಥೆ ಮಾಡಿದ್ದ 32 ವರ್ಷದ ಯುವಕ ಶುಕ್ರವಾರ ರಾತ್ರಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ನರಸೀಪುರ ತಾಲೂಕಿನ ಮಲಿಯೂರಿನ ಮಹೇಶ್ (23) ಮತ್ತು ಇವರ ಸ್ನೇಹಿತ ಮಾದೇಶ್(28) ಮೃತರು. ಇವರು ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಮಲಿಯೂರು ಗ್ರಾಮಕ್ಕೆ ಬೈಕ್​ನಲ್ಲಿ ಬರುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಮದ್ದೂರು- ಮಳವಳ್ಳಿ ರಸ್ತೆಯ ಬುಗುತಹಳ್ಳಿ ಬಳಿ ಸುಮಾರು 10.30ರಲ್ಲಿ ಅಪರಿಚಿತ ವಾಹನ ಡಿಕ್ಕಿಹೊಡೆದು ಇವರಿಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ.

ಮಹೇಶ್ ಲಾಕ್​ಡೌನ್ ವೇಳೆ ಚೆಕ್ ಪೋಸ್ಟ್ ಸಿಬ್ಬಂದಿಗೆ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ತಿಂಡಿ, ಊಟದ ವ್ಯವಸ್ಥೆ ಮಾಡಿಸಿದ್ದರು. ಅವರ ಅಗಲಿಕೆಗೆ ಕರೊನಾ ಸೇನಾನಿಗಳು ಕಂಬನಿ ಮಿಡಿದಿದ್ದಾರೆ. ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ದೇಹಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net