

ಹಾಸನ: ಹಾಡುಹಗಲೇ ನಗರದಲ್ಲಿ ಗುಂಡಿನ ದಾಳಿ ನಡೆದಿದ್ದು, ದುಷ್ಕರ್ಮಿಗಳ ಶೂಟೌಟ್‌ಗೆ ಇಬ್ಬರು ಯುವಕರು ಮೃತರಾಗಿದ್ದಾರೆ ಎಂದು ವರದಿಯಾಗಿದೆ.
ಹಾಸನದ ಹೊಯ್ಸಳ ನಗರದಲ್ಲಿ ಭೀಕರ ಘಟನೆ ಸಂಭವಿಸಿದ್ದು, ಗುಂಡು ಹಾರಿಸಿ ಇಬ್ಬರನ್ನು ಹತ್ಯೆಗೈದ ಹಂತಕರು ಕೆಲವೇ ಕ್ಷಣಗಳಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ...