

ಮಂಗಳೂರು : ಸಂವಿಧಾನದ ಹತ್ತನೇ ಅನುಸೂಚಿಯಡಿ ಸಭಾಧ್ಯಕ್ಷರ ಅಧಿಕಾರ ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರದ ಸ್ಪೀಕರ್ ರಾಹುಲ್ ನಾರ್ವೇಕರ್ ಸಮಿತಿಯ ಅಧ್ಯಕ್ಷರಾಗಿದ್ದು, ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ಸಮಿತಿ ಸದಸ್ಯರಾಗಿದ್ದಾರೆ.