More

    ಸಾಂಸ್ಥಿಕ ಕ್ವಾರಂಟೈನ್ನಲ್ಲಿರಿಸಿದ ಜಿಲ್ಲಾಡಳಿತ

    ಯಾದಗಿರಿ: ಮುಂಬಯಿನಿಂದ ಸೋಮವಾರ ರಾತ್ರಿ ಉದ್ಯಾನ್ ರೈಲು ಮೂಲಕ ಜಿಲ್ಲೆಗೆ ಒಟ್ಟು 143 ವಲಸೆಗಾರರು ಬಂದಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

    ಯಾದಗಿರಿ ರೈಲು ನಿಲ್ದಾಣಕ್ಕೆ ಬಂದಿಳಿದ ಎಲ್ಲ ಪ್ರಯಾಣಿಕರನ್ನು ಕೇಂದ್ರ, ರಾಜ್ಯ ಸಕರ್ಾರದ ಮಾರ್ಗಸೂಚಿ ಹಾಗೂ ಶಿಷ್ಟಾಚಾರದಂತೆ ಸ್ಟ್ಯಾಂಪಿಂಗ್ ಮತ್ತು ಹೆಲ್ತ್ ಸ್ಕ್ರೀನಿಂಗ್ ಮಾಡಿ ನಿಗದಿತ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಅವಲೋಕನೆಗಾಗಿ ಇರಿಸಲಾಗಿದೆ. ಮಹಾರಾಷ್ಟ್ರ ರಾಜ್ಯದಿಂದ ಯಾರಾದರೂ ಜಿಲ್ಲೆಗೆ ಆಗಮಿಸಿದಲ್ಲಿ ಅಂತಹ ವ್ಯಕ್ತಿಗಳ ಮಾಹಿತಿ ಜಿಲ್ಲಾಡಳಿತ ಕಂಟ್ರೋಲ್ ರೂಮ್ ಸಹಾಯವಾಣಿ: 08473 253950 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಮನವಿ ಮಾಡಿದ್ದಾರೆ.

    ಅಲ್ಲದೆ ಹೊರ ರಾಜ್ಯದಿಂದ ಆಗಮಿಸಿದ ವಲಸೆಗಾರರಿಗೆ ಗೃಹ ದಿಗ್ಬಂಧನದಲ್ಲಿ ಇರುವಂತೆ ಸೂಚನೆ ನೀಡಿದರೂ ಸಕರ್ಾರದ ಆದೇಶ ಪಾಲಿಸದೆ ಕರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಹರಡಿಸುವ ದುರುದ್ದೇಶದಿಂದ ತಾಂಡಾದಲ್ಲಿ ತಿರುಗಾಡುವುದು ಕಂಡುಬಂದ ಕಾರಣ ವಡಗೇರಾ ತಾಲೂಕಿನ ಬೀರನಕಲ್ ತಾಂಡಾ ಮತ್ತು ಕಮಲನಾಯಕ ತಾಂಡಾದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

    ಗೃಹ ದಿಗ್ಬಂಧನ ಅವಲೋಕನೆಗಾಗಿ ಇರುವ ಜನರು, ಅವಧಿ ಮುಗಿಯುವವರೆಗೆ ಕಡ್ಡಾಯವಾಗಿ ಗೃಹ ದಿಗ್ಬಂಧನದಲ್ಲಿ ಇರತಕ್ಕದ್ದು. ಒಂದು ವೇಳೆ ಗೃಹ ದಿಗ್ಬಂಧನ ಬಿಟ್ಟು ಹೊರಗಡೆ ತಿರುಗಾಡಿದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಹಾಗೂ ಅಂತವರನ್ನು ಮತ್ತೆ ಸಾಂಸ್ಥಿಕ ದಿಗ್ಬಂಧನದಲ್ಲಿ ಅವಲೋಕನೆಗಾಗಿ ಇರಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts