20.4 C
Bangalore
Monday, December 9, 2019

ತಡರಾತ್ರಿ ಮಗನೊಂದಿಗೆ ಶರಾದ್​ ಪವಾರ್​ ಮನೆಗೆ ಧಾವಿಸಿದ ಉದ್ಧವ್​ ಠಾಕ್ರೆ: ಕುತೂಹಲ ಮೂಡಿಸಿದ ನಾಯಕರ ಭೇಟಿ!

Latest News

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಮೊದಲ ಹಂತದ ಮತ ಎಣಿಕೆ ಶಿವರಾಮ ಹೆಬ್ಬಾರಗೆ 5004 ಮತ ಮುನ್ನಡೆ

ಕಾರವಾರ: ಕುತೂಹಲ ಕೆರಳಿಸಿರುವ ವಿಧಾನಸಭೆಯ 15 ಕ್ಷೇತ್ರಗಳ ಉಪಚುನಾವಣೆಯ ಪೈಕಿ ಯಲ್ಲಾಪುರ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಮೊದಲ ಹಂತದ ಮತ ಎಣಿಕೆಯಲ್ಲಿ...

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಇಂದು ಅಂತ್ಯಕಾಣುವ ಲಕ್ಷಣಗಳು ಕಾಣಿಸುತ್ತಿವೆ. ಶಿವಸೇನಾ ಜತೆ ಕಾಂಗ್ರೆಸ್​ ಮತ್ತು ಎನ್​ಸಿಪಿ ಮೈತ್ರಿ ಮಾಡಿಕೊಳ್ಳಲು ಕೆಲವು ಷರತ್ತುಗಳೊಂದಿಗೆ ಸಮ್ಮತಿಸಿವೆ ಎನ್ನಲಾಗಿದೆ. ಇಂದು ಮೂರು ಪಕ್ಷಗಳು ಅಧಿಕೃತವಾಗಿ ಮೈತ್ರಿಯನ್ನು ಘೋಷಿಸಲಿವೆ. ಇದರ ನಡುವೆ ಗುರುವಾರ ತಡರಾತ್ರಿ ಶಿವಸೇನಾ ಮುಖ್ಯಸ್ಥ ಉದ್ಧವ್​ ಠಾಕ್ರೆ, ಮಗ ಆದಿತ್ಯ ಠಾಕ್ರೆ ಜತೆಗೂಡಿ ಎನ್​ಸಿಪಿ ಅಧ್ಯಕ್ಷ ಶರಾದ್​ ಪವಾರ್​ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಈ ಮಹತ್ವದ ಭೇಟಿಯು ದಕ್ಷಿಣ ಮುಂಬೈನಲ್ಲಿರುವ ಶರಾದ್​ ಪವಾರ್​ ಅವರ ಸಿಲ್ವರ್​ ಓಕ್​ ನಿವಾಸದಲ್ಲಿ ನಡೆದಿದೆ. ಈ ವೇಳೆ ಶಿವಸೇನಾ ನಾಯಕ ಸಂಜಯ್​ ರಾವತ್​ ಮತ್ತು ಎನ್​ಸಿಪಿಯ ಸಜಿತ್​ ಪವಾರ್​ ಕೂಡ ಉಪಸ್ಥಿತರಿದ್ದರು.

ಶಿವಸೇನೆಯ ರಾಜ್ಯಸಭಾ ಸಂಸದರೊಬ್ಬರು ಗುರುವಾರ ಸಂಜೆ ದೆಹಲಿಯಿಂದ ಮುಂಬೈಗೆ ಬಂದ ತಕ್ಷಣವೇ ಉದ್ಧವ್​ ಠಾಕ್ರೆ, ಶರಾದ್​ ಪವಾರ್​ರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ. ಸರ್ಕಾರ ರಚನೆ ಕುರಿತಾದ ಅಂತಿಮ ನಿರ್ಣಯಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಕಾಂಗ್ರೆಸ್​ ಜತೆ ನಡೆಯುವ ಸಭೆಯ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಗುರುವಾರ ಬೆಳಗ್ಗೆ ದೆಹಲಿಯಲ್ಲಿ ಮಾತನಾಡಿದ್ದ ಕಾಂಗ್ರೆಸ್​ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್​ ಚೌಹಾಣ್​, ಮಹಾರಾಷ್ಟ್ರ ಸರ್ಕಾರ ರಚನೆ ಕುರಿತಾದ ಸಮಸ್ಯೆಗಳು ನಿವಾರಣೆಯಾಗಿದ್ದು, ಕಾಂಗ್ರೆಸ್​-ಎನ್​ಸಿಪಿ ಸರ್ವಾನುಮತದಿಂದ ಒಪ್ಪಿಕೊಂಡಿದೆ. ಸದ್ಯ ಶಿವಸೇನೆಯೊಂದಿಗೆ ಮೈತ್ರಿ ರೂಪುರೇಷೆಗಳ ಬಗ್ಗೆ ಚರ್ಚಿಸಬೇಕೆಂದು ಹೇಳಿದ್ದರು. ಇದರ ಬೆನ್ನಲ್ಲೇ ಗುರುವಾರ ತಡರಾತ್ರಿ ಎನ್​ಸಿಪಿ-ಶಿವಸೇನಾ ಸಭೆ ನಡೆದಿದೆ.

ಶುಕ್ರವಾರ ಶಿವಸೇನಾ ಮತ್ತು ಕಾಂಗ್ರೆಸ್​ ನಡುವೆ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಬಳಿಕ ಮೈತ್ರಿ ಕುರಿತಾದ ಕೊನೆಯ ಹಾಗೂ ಅಧಿಕೃತ ನಿರ್ಧಾರ ಹೊರಬೀಳಲಿದೆ. ಮೂರು ಪಕ್ಷಗಳು ಸೇರಿ ಇಂದು ಸರ್ಕಾರ ರಚನೆ ಕುರಿತು ಔಪಚಾರಿಕವಾಗಿ ಘೋಷಣೆ ಮಾಡಲಿವೆ. ಕಾಂಗ್ರೆಸ್​ ಮತ್ತು ಎನ್​ಸಿಪಿ ಉದ್ಧವ್​ ಠಾಕ್ರೆ ಮುಖ್ಯಮಂತ್ರಿಯಾಗಬೇಕೆಂದು ಬೇಡಿಕೆ ಇಟ್ಟಿವೆ ಎಂಬುದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದರೊಂದಿಗೆ ಇಂದು ಉದ್ಧವ್​ ಠಾಕ್ರೆ ಕೂಡ ತಮ್ಮ ಪಕ್ಷದ ಶಾಸಕರು ಹಾಗೂ ನಾಯಕರೊಂದಿಗೆ ಸಭೆ ನಡೆಸಿ ಸರ್ಕಾರ ರಚನೆ ಸಂಬಂಧ ಚರ್ಚಿಸಲಿದ್ದಾರೆ. (ಏಜೆನ್ಸೀಸ್​)

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...