More

    ಶಿವಸೇನೆಯಿಂದ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಅವರನ್ನು ವಜಾಗೊಳಿಸಿದ ಉದ್ಧವ್​ ಠಾಕ್ರೆ

    ಮುಂಬೈ: ಸದ್ಯ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಶಮನಗೊಂಡ ಬೆನ್ನಲ್ಲೇ ಶಿವಸೇನೆ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಅಧ್ಯಕ್ಷ ಉದ್ಧವ್ ಠಾಕ್ರೆ ತಮ್ಮ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ್ ಶಿಂಧೆ ಅವರನ್ನು ಶಿವಸೇನಾ ನಾಯಕನ ಸ್ಥಾನದಿಂದ ವಜಾಗೊಳಿಸಿದ್ದಾರೆ.

    ಶಿಂಧೆ ನೇತೃತ್ವದ ಬಂಡಾಯ ಶಾಸಕರಿಂದಲೇ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಇದೀಗ ಪಕ್ಷ ವಿರೋಧಿಪ ಚಟುವಟಿಕೆಗಳಲ್ಲಿ ತಡಗಿದ್ದಕ್ಕಾಗಿ ಶಿಂಧೆ ಅವರನ್ನು ತೆಗೆದುಹಾಕಲಾಗಿದೆ ಎಂದು ಶಿವಸೇನೆ ಹೇಳಿದೆ.

    ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿರುವ ಏಕನಾಥ್​ ಶಿಂಧೆ ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಲ್ಲದೇ, ಪಕ್ಷದ ಸದಸ್ಯತ್ವವನ್ನು ಸ್ವಯಂಪ್ರೇರಿತವಾಗಿ ತ್ಯಜಿಸಿದ್ದಾರೆ. ಆದ್ದರಿಂದ ಶಿವಸೇನೆ ಪಕ್ಷದ ಅಧ್ಯಕ್ಷನಾಗಿ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ ಪಕ್ಷ ಸಂಘಟನೆಯ ಶಿವಸೇನೆ ನಾಯಕ ಸ್ಥಾನದಿಂದ ತೆಗೆದುಹಾಕುತ್ತಿದ್ದೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ. (ಏಜೆನ್ಸೀಸ್​)

    ವಿವಾಹಪೂರ್ವ ಲೈಂಗಿಕತೆ ಹಾಗೂ ಗರ್ಭಾವಸ್ಥೆಗೆ ನನ್ನ ಬೆಂಬಲವಿದೆ: ಮತ್ತೆ ಟ್ರೋಲ್​ ಆದ ದಿಯಾ ಮಿರ್ಜಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts