More

    370ನೇ ವಿಧಿ ರದ್ದತಿ; ಪ್ರಧಾನಿ ಮೋದಿ ಕಾಶ್ಮೀರಿ ಪಂಡಿತರಿಗೆ ಮತದಾನ ಮಾಡುವ ಗ್ಯಾರಂಟಿ ಕೊಡುವರೇ: ಉದ್ಧವ್​ ಠಾಕ್ರೆ

    ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಕ್ಷನ್ 370 ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ ಇಂದು ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್​ ತೀರ್ಪನ್ನು ಸ್ವಾಗತಿಸಿರುವ ಶಿವಸೇನೆ (UBT) ಮುಖ್ಯಸ್ಥ ಉದ್ಧವ್​ ಠಾಕ್ರೆ ಈ ವಿಚಾರವಾಗಿ ಪ್ರಧಾನಿ ಮೋದಿ ಅವರು ಗ್ಯಾರಂಟಿ ಕೊಡುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

    ನಾಗ್ಪುರದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗಿ ಮಾತನಾಡಿದ ಉದ್ಧವ್​ ಸುಪ್ರೀಂ ಕೋರ್ಟ್​ ನಿರ್ದೇಶನದಂತೆ ಜಮ್ಮು-ಕಾಶ್ಮೀರಕ್ಕೆ ಆದಷ್ಟು ಬೇಗ ರಾಜ್ಯ ಸ್ಥಾನಮಾನ ನೀಡಿ ವಿಧಾನಸಭೆ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

    ಇದನ್ನೂ ಓದಿ: ಅರ್ಜುನನಿಗೆ ಗುಂಡೇಟು ಬಿದ್ದಿಲ್ಲ; ಸಾವಿನ ರಹಸ್ಯ ಬಿಚ್ಚಿಟ್ಟ ವೈದ್ಯ

    ನಾವು ಸುಪ್ರೀಂ ಕೋರ್ಟ್​ ತೀರ್ಪನ್ನು ಸ್ವಾಗತಿಸುತ್ತೇವೆ. ಈ ಹಿಂದೆ ನಾವು ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರದ ಕ್ರಮವನ್ನು ನಾವು ಬೆಂಬಲಿಸಿದ್ದೆವು. ಇದೀಗ ಮುಂದಿನ ವರ್ಷ ಸೆಪ್ಟೆಂಬರ್​ ಒಳಗಾಗಿ ವಿಧಾನಸಭೆ ಚುನಾವಣೆ ನಡೆಸಬೇಕೆಂಬ ಸುಪ್ರೀಂ ಕೋರ್ಟ್​ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಅದರಂತೆ ಅಲ್ಲಿ ಬೇಗ ಚುನಾವಣೆ ನಡೆದು ಜನರು ಶಾಂತಿಯುತವಾಗಿ ಮತದಾನ ಮಾಡಲಿ ಎಂದಿದ್ದಾರೆ.

    ನಮ್ಮ ದೇಶದ ಅವಿಭಾಜ್ಯ ಅಂಗವಾಗಿರುವ ಕಾಶ್ಮೀರಕ್ಕೆ ಪೊಕೆಯನ್ನು ಸೇರ್ಪಡೆಗೊಳಿಸಿ ಚುನಾವಣೆ ನಡೆಸಬೇಕೆಂದು ನಾವು ಸರ್ಕಾರಕ್ಕೆ ಆಗ್ರಹಿಸುತ್ತೇವೆ. ಇತ್ತೀಚಿನ ದಿನಗಳಲ್ಲಿ ಗ್ಯಾರಂಟಿ ಎಂಬ ಪದ ಹೆಸರುವಾಸಿಯಾಗಿದ್ದು, ಕಾಶ್ಮೀರಿ ಪಂಡಿತರು ತಮ್ಮ ತವರಿಗೆ ಹಿಂತಿರುಗಿ ಮತದಾನ ಮಾಡುವ ಬಗ್ಗೆ ಯಾರು ಗ್ಯಾರಂಟಿ ಕೊಡುತ್ತಾರೆ. ಪಂಡಿತರು ಸುರಕ್ಷಿತವಾಗಿ ಕಾಶ್ಮೀರಕ್ಕೆ ಹಿಂತಿರುಗುತ್ತಾರೆಯೇ ಎಂಬ ಬಗ್ಗೆ ಪ್ರಧಾನಿ ಮೋದಿ ಅವರು ಗ್ಯಾರಂಟಿ ಕೊಡುತ್ತಾರೆಯೇ ಎಂದು ಶಿವಸೇನೆ (UBT) ಮುಖ್ಯಸ್ಥ ಉದ್ಧವ್​ ಠಾಕ್ರೆ ಪ್ರಶ್ನಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts