ಬಿಜೆಪಿ-ಕಾಂಗ್ರೆಸ್​ ನಡುವೆ ಮಾರಾಮಾರಿ: ಉಡುಪಿಯಲ್ಲಿ 144 ಸೆಕ್ಷನ್​ ಜಾರಿ

ಉಡುಪಿ: ಭಾರತ್​ ಬಂದ್​ಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ನಡೆದ ಮಾರಾಮಾರಿ ಬೆನ್ನಲ್ಲೆ ಉಡುಪಿಯಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ.

ನಗರಸಭೆ ವ್ಯಾಪ್ತಿಯಲ್ಲಿ ನಾಳೆ ಬೆಳಗ್ಗೆ 6 ಗಂಟೆವರೆಗೆ 144 ಸೆಕ್ಷನ್​ ಜಾರಿಗೊಳಿಸಿ ತಹಸೀಲ್ದಾರ್ ಪ್ರದೀಪ್ ಕುರುಡೇಕರ್ ಆದೇಶ ಹೊರಡಿಸಿದ್ದಾರೆ.

ಘಟನೆ ಹಿನ್ನೆಲೆ
ಉಡುಪಿಯ ಬನ್ನಂಜೆ ಎಸ್​ಪಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಬಂದ್​ಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಗರಾಧ್ಯಕ್ಷ ಪ್ರಭಾಕರ ಪೂಜಾರಿ ಮೇಲೆ​ ಹಲ್ಲೆ ನಡೆಸಿದ್ದರು. ಇದನ್ನು ಖಂಡಿಸಿ ಕೈ-ಕಮಲ ಕಾರ್ಯಕರ್ತರ ನಡುವೆ ಜಟಾಪಟಿ ಉಂಟಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. (ದಿಗ್ವಿಜಯ ನ್ಯೂಸ್​)