ಉಡುಪಿ ಟಾಯ್ಲೆಟ್​ನಲ್ಲಿ ವಿಡಿಯೋ ಮಾಡಿದ ಪ್ರಕರಣ; ತಯಾರಾಗುತ್ತಾ ಮಹಿಳಾ ಪೊಲೀಸರ ಹೊಸ ತನಿಖಾ ತಂಡ?

udupi
Published on

ಉಡುಪಿ: ಉಡುಪಿ ಖಾಸಗಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ಹೆಣ್ಣುಮಕ್ಕಳು ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಮಾಡಿದ ಪ್ರಕರಣ ರಾಜ್ಯಾದ್ಯಂತ ವಿವಾದ ಹುಟ್ಟಿಸಿ ಹಾಕಿದೆ. ಈ ಪ್ರಕರಣದ ವಿಚಾರವಾಗಿ ತನಿಖೆ ಮಾಡಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬಂದು ಹೇಳಿಕೆ ನೀಡಿದ್ದೂ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಹೊಸ ತನಿಖಾ ತಂಡ ರಚಿಸಿ ತನಿಖೆ ನಡೆಸುವ ಸಾಧ್ಯತೆ ಕಂಡು ಬರುತ್ತಿದ್ದು ಈ ತಂಡದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಹೊಸ ತಂಡ ರಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಜಾಮೀನು ಮಂಜೂರಾದರು ಪೊಲೀಸರ ತನಿಖೆ ಇನ್ನು ಶುರುವಾಗಿಲ್ಲ. ಅದಲ್ಲದೇ ಮಲ್ಪೆ ಪೊಲೀಸ್ ಅಧಿಕಾರಿಗಳು ಪ್ರಕರಣದ ತನಿಖೆಗೆ ನಿರ್ಲಕ್ಷ ತೋರಿಸಿದ್ದಾರೆ ಎನ್ನುವ ಆರೋಪವೂ ಇದ್ದು ಇನ್ಸ್ಪೆಕ್ಟರ್ ಮಂಜುನಾಥ ಗೌಡ ವಿರುದ್ಧ ಆಕ್ರೋಶದ ಮಾತುಗಳು ಕೇಳಿಬರುತ್ತಿದೆ. ಪೊಲೀಸರು ವೀಕ್ ಸೆಕ್ಷನ್​ಗಳನ್ನು ಹಾಕಿ ಪ್ರಕರಣವನ್ನು ಹಳ್ಳ ಹಿಡಿಸಿದ್ದಾರೆ ಎನ್ನುವ ಆರೋಪವೂ ಇದೆ.

ಸದ್ಯ ಇರುವ ತನಿಖಾ ತಂಡ, ತನಿಖಾಧಿಕಾರಿ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದ್ದು ಹೊಸ ತನಿಖಾ ತಂಡ ರಚಿಸುವಂತೆ ಆಗ್ರಹವೂ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಹೊಸ ತನಿಖಾ ತಂಡದ ರಚನೆಗೆ ಸಿದ್ದತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net