More

    160 ಮಂದಿಗೆ ಪಾಸಿಟಿವ್

    ಉಡುಪಿ: ಜಿಲ್ಲೆಯಲ್ಲಿ ಗುರುವಾರ 160 ಮಂದಿಗೆ ಕರೊನಾ ಪಾಸಿಟಿವ್ ದೃಢಪಟ್ಟಿದೆ. ಉಡುಪಿ 87, ಕುಂದಾಪುರ 60, ಕಾರ್ಕಳದ 13 ಮಂದಿಗೆ ಪಾಸಿಟಿವ್ ಬಂದಿದೆ. ಇದರಲ್ಲಿ ಮುಂಬೈನಿಂದ ಬಂದವರು 6 ಮಂದಿ, ಬೆಂಗಳೂರಿನಿಂದ ಬಂದ ಇಬ್ಬರು. ಪುಣೆ, ಮಂಗಳೂರಿನಿಂದ ಆಗಮಿಸಿದ ತಲಾ ಒಬ್ಬರಲ್ಲಿ ಸೋಂಕು ಕಂಡುಬಂದಿದೆ.

    ಸ್ಥಳೀಯವಾಗಿ ಇಲ್‌ನೆಸ್‌ಗೆ ಸಂಬಂಧಿಸಿ 42 ಮಂದಿಗೆ, ಉಸಿರಾಟ ಸಮಸ್ಯೆಯಿದ್ದ ನಾಲ್ವರಿಗೆ ಸೋಂಕು ಪತ್ತೆಯಾಗಿದೆ. 14 ಮಕ್ಕಳು, 87 ಪುರುಷರು, 59 ಮಂದಿ ಮಹಿಳೆಯರು ಸೋಂಕು ಬಾಧಿತರು. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2846ಕ್ಕೆ ಏರಿಕೆಯಾಗಿದೆ.

    276 ಮಂದಿಯದು ನೆಗೆಟಿವ್: ಜಿಲ್ಲೆಯಲ್ಲಿ ಗುರುವಾರ 276 ಮಂದಿಯ ವರದಿ ನೆಗೆಟಿವ್ ಬಂದಿದೆ. ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಒಳಪಟ್ಟ 405 ಮಂದಿ ಸೇರಿದಂತೆ 622 ಮಂದಿಯ ಗಂಟಲದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇನ್ನೂ 653 ಮಂದಿಯ ವರದಿ ಬರಲು ಬಾಕಿ ಇದೆ. ಇದೂವರೆಗೆ 1841 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿವರೆಗೆ 448 ಮಂದಿ ಹೋಂ ಐಸೋಲೇಶನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 994 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಪಾಸಿಟಿವ್ ಬಂದಿದ್ದ ವೃದ್ಧೆ ಸಾವು: ಕರೊನಾ ಪಾಸಿಟಿವ್ ಬಂದಿದ್ದ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ 70 ವರ್ಷದ ವೃದ್ಧೆಯೊಬ್ಬರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರು ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲ ಸಮಯದಿಂದ ಶೀತ-ಜ್ವರವೂ ಇತ್ತು. ಈ ಹಿನ್ನೆಲೆಯಲ್ಲಿ ಅವರ ಗಂಟಲ ದ್ರವ ಮಾದರಿ ಸಂಗ್ರಹಿಸಿ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಪಾಸಿಟಿವ್ ವರದಿ ಬಂದ ಒಂದೂವರೆ ತಾಸಿನಲ್ಲಿ ವೃದ್ಧೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts