More

    173 ಪಾಸಿಟಿವ್, ಇಬ್ಬರ ಸಾವು

    ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಮಂದಿಗೆ ಕರೊನಾ ಪಾಸಿಟಿವ್ ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3895ಕ್ಕೆ ಹಾಗೂ ಮೃತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

    ಮಣಿಪಾಲ ಆಸ್ಪತ್ರೆಗೆ ವಾರದ ಹಿಂದೆ ದಾಖಲಾಗಿದ್ದ ಕಾರ್ಕಳ ತಾಲೂಕಿನ 72 ವರ್ಷದ ಪುರುಷ ಹಾಗೂ ಚಿತ್ರದುರ್ಗ ಮೂಲದ 70 ವರ್ಷದ ವ್ಯಕ್ತಿ ಮೃತಪಟ್ಟವರು.

    ಬುಧವಾರ ಪತ್ತೆಯಾದ ಸೋಂಕಿತರಲ್ಲಿ 102 ಪುರುಷರು, 65 ಮಹಿಳೆಯರು, ಹೆಣ್ಮಕ್ಕಳು 4, ಇಬ್ಬರು ಗಂಡು ಮಕ್ಕಳು ಸೇರಿದ್ದಾರೆ. ಇವರಲ್ಲಿ ಉಡುಪಿಯ 95 ಮಂದಿ, ಕುಂದಾಪುರ 37 ಹಾಗೂ 41 ಮಂದಿ ಕಾರ್ಕಳದವರು. 29 ಮಂದಿ ಹೋಂ ಐಸೋಲೇಶನ್‌ಗೆ ಒಳಗಾಗಿದ್ದಾರೆ. 84 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 1547 ಸಕ್ರಿಯ ಪ್ರಕರಣಗಳಿವೆ.

    ಕುಂದಾಪುರದ ಇಬ್ಬರು ಮೃತ
    ಕುಂದಾಪುರ/ಗಂಗೊಳ್ಳಿ: ಕುಂದಾಪುರ ತಾಲೂಕಿನಲ್ಲಿ ಬುಧವಾರ ಇಬ್ಬರು ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ಪಾಸಿಟಿವ್ ಬಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಆಜ್ರಿ ಗ್ರಾಮ ನಿವಾಸಿ 70 ವರ್ಷದ ವ್ಯಕ್ತಿ ಹಾಗೂ ಜು.24ರಂದು ಕಡಿಮೆ ರಕ್ತದೊತ್ತಡದಿಂದ ಆಸ್ಪತ್ರೆಗೆ ದಾಖಲಾಗಿದ್ದ ಗುಜ್ಜಾಡಿ ಗ್ರಾಮದ 70 ವರ್ಷದ ವ್ಯಕ್ತಿ ಮೃತರು. ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜ್ಜಾಡಿ ನಿವಾಸಿಯ ಮೃತದೇಹದ ಅಂತ್ಯಸಂಸ್ಕಾರ ಅಧಿಕಾರಿಗಳ ಸಮ್ಮುಖ ನಿಯಮದಂತೆ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts