More

    ಉಡುಪಿಯಲ್ಲಿ 322 ಮಂದಿಗೆ ಕರೊನಾ

    ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 2262 ಮಂದಿಗೆ ಕರೊನಾ ವರದಿ ನೆಗೆಟಿವ್, 322 ಮಂದಿಗೆ ಪಾಸಿಟಿವ್ ಬಂದಿದೆ.

    ಒಟ್ಟು ಸೋಂಕಿತರ ಸಂಖ್ಯೆ 7490ಕ್ಕೆ ಏರಿಕೆಯಾಗಿದೆ. 322 ಮಂದಿಯಲ್ಲಿ ಉಡುಪಿ 186, ಕುಂದಾಪುರ 95, ಕಾರ್ಕಳದ 36 ಮಂದಿ, ಹೊರ ಜಿಲ್ಲೆಯ ಐವರು ಸೇರಿದ್ದಾರೆ. ವಿವಿಧ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಐವರು ಮೃತಪಟ್ಟಿದ್ದು, ಇವರಿಗೆ ಕರೊನಾ ಸೋಂಕು ಇರುವುದು ದೃಢಪಟ್ಟಿದೆ.

    ಹೋಂ ಮತ್ತು ಆಸ್ಪತ್ರೆ ಐಸೋಲೇಶನ್‌ನಿಂದ 614 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಗುಣವಾದವರ ಸಂಖ್ಯೆ 4872ಕ್ಕೆ ತಲುಪಿದೆ.

    ಕೋವಿಡ್-19 ರ‌್ಯಾಂಡಮ್ ಪರೀಕ್ಷೆ ವ್ಯವಸ್ಥೆ ಚುರುಕುಗೊಂಡಿದ್ದು ಶುಕ್ರವಾರ 2369 ಮಂದಿಯ ಗಂಟಲ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇನ್ನೂ 1640 ಮಂದಿಯ ವರದಿ ಬರಲು ಬಾಕಿ ಇದೆ. 2550 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts