ಉಡುಪಿ ಡಿಸಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ!

dc vidyakumari k
Published on

ಉಡುಪಿ: ವಂಚನೆ ಮಾಡುವವರಿಗೆ ಬಡವ&ಶ್ರೀಮಂತರೆಂಬ ತಾರತಮ್ಯ ಅಥವಾ ಅಧಿಕಾರಿಗಳೆಂಬ ಭಯವೂ ಇರುವುದಿಲ್ಲ ಎನ್ನುವುದಕ್ಕೆ ಜಿಲ್ಲಾಧಿಕಾರಿಯೂ ಹೊರತಲ್ಲ ಎನ್ನುವುದಕ್ಕೆ ಇಲ್ಲೊಂದು ಪ್ರಕರಣ ಸಾಕ್ಷಿಯಾಗಿದೆ.

ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಈ ಕುರಿತಂತೆ ಉಡುಪಿ ಪೊಲೀಸರಿಗೆ ಜಿಲ್ಲಾಧಿಕಾರಿ ದೂರು ನೀಡಿದ್ದಾರೆ.

ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಖಾತೆ ತೆರೆದು ಶಿವಮೊಗ್ಗ ಹಾಗೂ ಉಡುಪಿಯ ತಹಸೀಲ್ದಾರರಿಗೆ ಹಣ ಕಳುಹಿಸುವಂತೆ ಸಂದೇಶ ಕಳುಹಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ತನಿಖೆ ನಡೆಸಿದ ಪೊಲೀಸರು, ಪಶ್ಚಿಮ ಬಂಗಾಳದ ವ್ಯಕ್ತಿಯೋರ್ವ ನಕಲಿ ಖಾತೆ ಸೃಷ್ಟಿಸಿ ವಂಚನೆ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net