ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

udp-31-dc
Published on

ಉಡುಪಿ: ಜಿಲ್ಲಾ ಮಟ್ಟದ  ಸ್ವಾತಂತ್ರ್ಯ ದಿನಾಚರಣೆ ಅಜ್ಜರಕಾಡು ಆ. 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚನೆ ನೀಡಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಆರ್​. ಹೆಬ್ಬಾಳಕರ್​ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಲಿದ್ದಾರೆ ಎಂದರು. ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸತಿಕ ಕಾರ್ಯಕ್ರಮ ನಡೆಯಲಿದೆ. ಪೊಲೀಸ್​, ನಕ್ಸಲ್​ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್​, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್​.ಸಿ.ಸಿ ಹಾಗೂ ಸ್ಕೌಟ್ಸ್​ ಮತ್ತು ಗೈಡ್ಸ್​ ಸೇರಿದಂತೆ ವಿವಿಧ ತಂಡಗಳಿಂದ ಆಕರ್ಷಕ ಕವಾಯತು ನಡೆಯಲಿದೆ. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ಸಹ ವಿತರಿಸಲಾಗುವುದು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೆ, ಗಣ್ಯವ್ಯಕ್ತಿಗಳಿಗೆ ಹಾಗೂ ಸ್ವಾತಂತ್ರ$್ಯ ಹೋರಾಟಗಾರರಿಗೆ ಹಾಗೂ ಅವರ ಕುಟಂಬದವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.

ಕಳೆದ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದವರು, ಅಂಗಾಂಗ ದಾನಿಗಳು ಸೇರಿದಂತೆ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಸಾಧಕರನ್ನು ಗುರುತಿಸಿ, ಗೌರವಿಸಲಾಗುವುದು ಎಂದರು. ಕ್ರೀಡಾಂಗಣದಲ್ಲಿ ತುರ್ತು ಆರೋಗ್ಯ ಸೇವೆಗೆ ಆಂಬುಲೆನ್ಸ್​ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ, ಎಎಸ್​ಪಿ ಸುಧಾಕರ್​ ನಾಯಕ್​, ಜಿಲ್ಲಾ ಪಂಚಾಯತ್​ ಮುಖ್ಯ ಯೋಜನಾಧಿಕಾರಿ ಡಾ. ಉದಯ್​ ಕುಮಾರ್​ ಶೆಟ್ಟಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್​ ವಿ. ನಾಯಕ್​ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net