More

    ಪಾರದರ್ಶಕ ಚುನಾವಣಾ ಕಾರ್ಯಕ್ಕೆ ಪ್ರಾದೇಶಿಕ ಆಯುಕ್ತರ ಸೂಚನೆ

    ಉಡುಪಿ: ಚುನಾವಣಾ ಕಾರ್ಯಗಳನ್ನು ಪಾರದರ್ಶಕತೆಯನ್ನು ನಿರ್ವಹಿಸಿ, ಅನಾವಶ್ಯಕ ದೂರುಗಳಿಗೆ ಆಸ್ಪದ ನೀಡದಂತೆ ಪ್ರಾದೇಶಿಕ ಆಯುಕ್ತ ಪ್ರಕಾಶ್ ಸೂಚನೆ ನೀಡಿದರು.

    ಬುಧವಾರ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಪೂರ್ವ ತಯಾರಿ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಕಾರ್ಯಗಳಲ್ಲಿ ನಿಯೋಜನೆಗೊಂಡಿರುವ ಪ್ರತಿಯೊಬ್ಬ ಅಧಿಕಾರಿ ಸಿಬ್ಬಂದಿ ಚುನಾವಣಾ ಆಯೋಗ ನೀಡುವ ನಿರ್ದೇಶನಗಳನ್ನು ಹಾಗೂ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಿದಾಗ ಚುನಾವಣಾ ಕಾರ್ಯ ಸರಳವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.

    ಪ್ರತಿಯೊಂದು ಮತದಾನ ಕೇಂದ್ರಗಳಲ್ಲಿಯೂ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ವಿದ್ಯುತ್ ಸಂಪರ್ಕ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡಲು ಹೆಲ್ತ್ ಕಿಟ್ ಗಳನ್ನೂ ಸಹ ಹೊಂದಬೇಕು. ಚುನಾವಣಾ ಕಾರ್ಯ ನಿರ್ವಹಿಸುತ್ತಿರುವವರ ಬಗ್ಗೆ ದೂರುಗಳು ಬಂದಾಗ ಅವುಗಳ ಬಗ್ಗೆ ಸಾಕ್ಷ್ಯಾಧರಗಳನ್ನು ಪಡೆಯುವುದು ಅವಶ್ಯ, ಅನಾಮಧೇಯ ಪತ್ರಗಳಿಗೆ ಹೆಚ್ಚಿನ ಒತ್ತು ನೀಡುವುದು ಅವಶ್ಯವಿಲ್ಲ ಎಂದರು.

    ಈ ಬಾರಿ ಚುನಾವಣಾ ಆಯೋಗವು 80 ವರ್ಷ ದಾಟಿದವರಿಗೆ, ಆಂಗವಿಕಲರಿಗೆ, ಕೋವಿಡ್ ಸೋಂಕಿತರಿಗೆ ಮನೆಯಿಂದಲೇ ಮತದಾನ ಮಾಡಲು ವಿಶೇಷ ಮತದಾನ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕಾರ್ಯಗಳನ್ನು ನಿರ್ವಹಿಸುವಾಗ ಎಲ್ಲಾ ಅಗತ್ಯ ಜಾಗೃತಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದರು.

    ಜಿಲ್ಲಾಧಿಕಾರಿ ಕೂರ್ಮಾರಾವ್ ಮಾಹಿತಿ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಎ.ಎಸ್ಪಿ ಸಿದ್ದಲಿಂಗಪ್ಪ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts