More

  ರಾಜ್ಯದ ಅಸಮರ್ಥ ಗೃಹ ಸಚಿವರ ಕೂಡಲೇ ವಜಾಗೊಳಿಸಿ

  ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ | ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ

  ವಿಜಯವಾಣಿ ಸುದ್ದಿಜಾಲ ಉಡುಪಿ
  ರಾಜ್ಯದಲ್ಲಿ ಕಾಂಗ್ರೆಸ್​ ನೇತೃತ್ವದ ಸರ್ಕಾರದಿಂದ ಅರಾಜಕತೆ ಸೃಷ್ಟಿಯಾಗಿದ್ದು, ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿದೆ. ನಿರಂತರ ಹತ್ಯೆಗಳು ನಡೆಯುತ್ತಿದ್ದು ಜನತೆ ಭಯಕ್ಕೊಳಗಾಗಿದ್ದಾರೆ. ಕೂಡಲೇ ರಾಜ್ಯದ ಅಸಮರ್ಥ ಗೃಹ ಸಚಿವರನ್ನು ವಜಾಗೊಳಿಸಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಸಂಧ್ಯಾ ರಮೇಶ್​ ಆಗ್ರಹಿಸಿದರು.

  ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರಕುಮಾರ್​ ಕುಂದಾಪುರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದರು.

  ಮಹಿಳೆಯರ ಮೇಲೆ ದೌರ್ಜನ್ಯ

  ಕಾಂಗ್ರೆಸ್​ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹತ್ಯೆ ಪ್ರಕರಣ ಹೆಚ್ಚುತ್ತಲಿದೆ. ದುಷ್ಕರ್ಮಿಗಳಿಗೆ ಕಾನೂನಿನ ಭಯವೂ ಇಲ್ಲದಾಗಿದೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಮಹಿಳೆಯರ ಹತ್ಯೆ ದಿನವೂ ಒಂದಲ್ಲ ಒಂದು ಟಿಸುತ್ತಲಿದೆ. ಆದರೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಲ್ಲಿ ಗೃಹಸಚಿವ ವಿಫಲಾರಾಗಿದ್ದು, ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

  ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್​. ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರ.ಕಾರ್ಯದರ್ಶಿ ನಳಿನಿ ಪ್ರದೀಪ್​ ರಾವ್​, ಅನಿತಾ ಮರವಂತೆ, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್​, ಉಡುಪಿ ನಗರ ಉಪಾಧ್ಯಕ್ಷೆ ದಯಾಶಿನಿ ಪಂದುಬೆಟ್ಟು, ವೀಣಾ ನಾಯ್ಕ್​, ಮಮತಾ ಶೆಟ್ಟಿ, ಅಶ್ವಿನಿ ಆರ್​. ಶೆಟ್ಟಿ, ಸುಧಾ ಪೈ, ಸರೋಜಾ ಹೆಗ್ಡೆ, ದೀಪಾ ಪೈ, ವಿದ್ಯಾ, ರಮ್ಯಾ ರಾವ್​, ಶೈಲಾ, ನೀತಾ ಗುರುರಾಜ್​, ಶ್ರೀನಿಧಿ ಹೆಗ್ಡೆ, ಮಟ್ಟು ಗೋಪಾಲಕೃಷ್ಣ ರಾವ್​ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts