More

    ಬಲಾಯಿಪಾದೆಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ


    ಉಡುಪಿ: ಬಲಾಯಿಪಾದೆ ಜಂಕ್ಷನ್‌ನಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿರುವುದರಿಂದ ಸ್ಥಳೀಯ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ಶೀಘ್ರದಲ್ಲಿ ಸರ್ವೀಸ್ ರಸ್ತೆ  ಕಾಮಗಾರಿ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು.
    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸರ್ವೀಸ್ ರಸ್ತೆ ನಿರ್ಮಾಣ ಕುರಿತ ಸಭೆಯಲ್ಲಿ ಮಾತನಾಡಿದರು.
    ಉಡುಪಿಯಿಂದ ಬಲಾಯಿಪಾದೆ ಹಾಗೂ ಉದ್ಯಾವರಕ್ಕೆ ತೆರಳುವ ಮಾರ್ಗದಲ್ಲಿ ಸರ್ವೀಸ್ ರಸ್ತೆ ಇಲ್ಲದ ಕಾರಣ ಹೆಚ್ಚಿನ ವಾಹನ ದಟ್ಟಣೆ ಉಂಟಾಗುತ್ತಿದೆ. ವಾಹನ ಸವಾರರು ರಾಂಗ್‌ರೂಟ್ ಮೂಲಕ ರಾಷ್ಟ್ರ್ರೀಯ ಹೆದ್ದಾರಿಗೆ ಬರುತ್ತಿದ್ದಾರೆ. ಕರಾವಳಿ ಜಂಕ್ಷನ್, ಕಟಪಾಡಿ ಹಾಗೂ ಅಂಬಾಗಿಲು-ಸಂತೆಕಟ್ಟೆ ಜಂಕ್ಷನ್‌ಗಳಲ್ಲಿಯೂ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಇಲ್ಲಿ ಅರ್ಧಕ್ಕೆ ನಿಲ್ಲಿಸಿದ ಕಾಮಗಾರಿಗಳನ್ನು ತಕ್ಷಣವೇ ಪೂರ್ಣಗೊಳಿಸುವಂತೆ ಎನ್.ಎಚ್. ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಹೆದ್ದಾರಿಗಳಲ್ಲಿ ಅಪಘಾತಗಳು ಸಂಭವಿಸಬಹುದಾದ ಸ್ಥಳಗಳನ್ನು ಗುರುತಿಸಿ, ವಿವರಗಳನ್ನು ಹೆದ್ದಾರಿ ಇಲಾಖೆಗೆ ಪೊಲೀಸ್ ಇಲಾಖೆ ನೀಡಬೇಕು. ನಂತರ ಈ ಪ್ರದೇಶಗಳ ಜಂಟಿ ಸ್ಥಳ ಪರಿಶೀಲನೆ ಮಾಡಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್‌ಪಿ ಕುಮಾರಚಂದ್ರ, ಕುಂದಾಪುರ ಸಹಾಯಕ ಕಮಿಷನರ್ ಕೆ.ರಾಜು, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿಶುಮೋಹನ್ ಅರುಣ್ ಉಪಸ್ಥಿತರಿದ್ದರು.

    ಬಾಕಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಮಳೆಯ ಕಾರಣದಿಂದ ಕುಂದಾಪುರ ಶಾಸ್ತ್ರಿ ಸರ್ಕಲ್, ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜು ಹಾಗೂ ಮಹೇಶ್ ಹಾಸ್ಪಿಟಲ್ ಬಳಿ, ಬಾರ್ಕೂರು ಕ್ರಾಸ್‌ಗಳಲ್ಲಿ ನಡೆಯುತ್ತಿದ್ದ ರಸ್ತೆ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿದ ಪರಿಣಾಮ ಅಪಘಾತಗಳು ಸಂಭವಿಸುತ್ತಿವೆ. ಇಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಹೆದ್ದಾರಿಯಲ್ಲಿ ಶೀಘ್ರವಾಗಿ ಬೀದಿದೀಪಗಳನ್ನು ದುರಸ್ತಿ ಮಾಡಬೇಕು. ಅಪೂರ್ಣಗೊಂಡ ಪಡುಬಿದ್ರಿ ಸರ್ವೀಸ್ ರೋಡ್ ಕಾಮಗಾರಿಗಳನ್ನು ತಕ್ಷಣವೇ ಕೈಗೊಂಡು ಈ ತಿಂಗಳ ಅಂತ್ಯದೊಳಗೆ ಕಾಮಗಾರಿ ಮುಕ್ತಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts