More

    ಉಡುಪಿ ಜಿಲ್ಲಾಸ್ಪತ್ರೆ ಸೀಲ್‌ಡೌನ್

    ಉಡುಪಿ: ಇಬ್ಬರು ವೈದ್ಯರು, ಒಬ್ಬ ನರ್ಸ್, ಇತರೆ ಇಬ್ಬರು ಸಿಬ್ಬಂದಿಗೆ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಜ್ಜರಕಾಡು ಸರ್ಕಾರಿ ಜಿಲ್ಲಾಸ್ಪತ್ರೆಯನ್ನು ಮೂರು ದಿನಗಳವರೆಗೆ ಕಾಲ ಸೀಲ್ಡೌನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆಸ್ಪತ್ರೆಯನ್ನು ಬಂದ್ ಮಾಡಿ, ಒಳಗಿನಿಂದ ಶುಚಿಗೊಳಿಸಲಾಗುವುದು. ತುರ್ತು ಚಿಕಿತ್ಸೆ, ಕೋವಿಡ್ ಐಸೋಲೇಶನ್, ಫಿವರ್ ಕ್ಲಿನಿಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆೆ.

    ತುರ್ತು ಚಿಕಿತ್ಸೆ ಬಿಟ್ಟು ಸಾಮಾನ್ಯ ರೋಗಿಗಳ ಪ್ರವೇಶಕ್ಕೆ ಅವಕಾಶವಿಲ್ಲ. ಸಾರ್ವಜನಿಕರಿಗೆ ಕಾಯಿಲೆ ಹರಡಬಾರದೆಂಬ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಆಸ್ಪತ್ರೆಯ ಎಲ್ಲ ವೈದ್ಯರು, ಸಿಬ್ಬಂದಿಯನ್ನು ಕರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪಾಸಿಟಿವ್ ಬಂದ ರೋಗಿಗೆ ಪರೀಕ್ಷಿಸಿದ ವೈದ್ಯರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts