ಉಡುಪಿ ಯುವತಿ ಸಾವಿನ ಪ್ರಕರಣದಲ್ಲಿ ಕೇಳಿಬಂತು ಗಂಭೀರ ಆರೋಪ: ಪ್ರಿಯಕರನ ಬಂಧನ..!

udupi girl
Published on

ಉಡುಪಿ: ಯುವತಿ ರಕ್ಷಿತಾ ನಾಯಕ್ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪ್ರಿಯಕರ ಪ್ರಶಾಂತ್​ ಕುಂದರ್​ನನ್ನು ಉಡುಪಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಪ್ರಶಾಂತ್ ವಿರುದ್ಧ ಅತ್ಯಾಚಾರ ಮತ್ತು ‌ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲಯಲ್ಲಿ ಆತನನ್ನು ಬಂಧಿಸಲಾಗಿದೆ. ಆರೋಪಿ ಪ್ರಶಾಂತ್​ ಕೊಲ್ಲೂರು ಸಮೀಪದ ಜಡ್ಕಲ್ ನಿವಾಸಿ. ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹೆಚ್ಚಿನ ತನಿಖೆಗಾಗಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿನಿ, ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ಗ್ರಾಮದ ರಕ್ಷಿತಾ ನಾಯಕ್​, ಅ.24ರ ರಾತ್ರಿ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು. ಅಂದು ಸಂಜೆ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ರಕ್ಷಿತಾಳನ್ನು ಆಟೋದಲ್ಲಿ ಕರೆತಂದ ಪ್ರಶಾಂತ್ ಕುಂದರ್‌, ಆಸ್ಪತ್ರೆಯ ಸ್ಟ್ರೆಚ್ಚರ್​ಗೆ ಹಾಕಿ ಎಸ್ಕೇಪ್​ ಆಗಿದ್ದ. ಇದಾದ ಕೆಲವೇ ಕ್ಷಣದಲ್ಲಿ ಯುವತಿ ಮೃತಪಟ್ಟಿದ್ದಳು. ಆಕೆಯ ಪಾಲಕರಿಗೂ ಆತನೇ ಕರೆ ಮಾಡಿ ವಿಷಯ ತಿಳಿಸಿದ್ದ. ಬಳಿಕ ಫೋನ್​ ಸ್ವಿಚ್ಡ್​ ಆಫ್​ ಮಾಡಿಕೊಂಡಿದ್ದ.

ಮಗಳು ರಕ್ಷಿತಾಳ ಸಾವು ಅನುಮಾನಾಸ್ಪದ ಎಂದು ಪಾಲಕರು ದೂರು ದಾಖಲಿಸಿದ್ದರು. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರು ಪ್ರಶಾಂತ್​ ಕುಂದರ್​ನನ್ನು ಕಳೆದ ಸೋಮವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಇದೀಗ ಬಂಧಿಸಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net