More

    ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ದುರುಳನಿಗೆ 20 ವರ್ಷ ಜೈಲು

    ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬ್ರಹ್ಮಾವರ ನಾಲ್ಕುದ್ರು ನಿವಾಸಿ ಭಾಸ್ಕರ ನಾಯ್ಕ ಶಿಕ್ಷೆಗೊಳಗಾದ ಅಪರಾಧಿ.

    ಈತ ಟ್ಯಾಕ್ಸಿ ಕ್ಯಾಬ್ ಬಾಡಿಗೆಗೆ ನಡೆಸುತ್ತಿದ್ದು, ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ. 2020ರಲ್ಲಿ ಶಾಲಾ ಬಾಲಕಿಯೊಬ್ಬಳನ್ನು ಪರಿಚಯಿಸಿಕೊಂಡು ಆಕೆಯನ್ನು ಹೆದರಿಸಿ ತನ್ನ ವಾಹನದಲ್ಲಿ ಕರೆದುಕೊಂಡು ಹೋಗಿ ಸಂತೆಕಟ್ಟೆ ಪೆರ್ಡೂರು ರಸ್ತೆ ಬದಿ ವಾಹನ ನಿಲ್ಲಿಸಿ ಮತ್ತು ಇನ್ನೊಂದು ಬಾರಿ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಬಾರ್ಕೂರು ಹಾಲಾಡಿ ರಸ್ತೆಗೆ ಕರೆದುಕೊಂಡು ಹೋಗಿ ವಾಹನದಲ್ಲಿ ಅತ್ಯಾಚಾರ ಎಸಗಿದ್ದ. ಆ ದಿನ ಅಕ್ಕ ಶಾಲೆಗೆ ಬಂದಿಲ್ಲ ಎಂದು ಬಾಲಕಿಯ ತಮ್ಮ ಪಾಲಕರ ಬಳಿ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿತ್ತು. ನಂತರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

    28 ಸಾಕ್ಷಿಗಳ ಪೈಕಿ 17 ಮಂದಿಯ ವಿಚಾರಣೆ ನಡೆಸಿದ್ದು, ಸಂತ್ರಸ್ತ ಬಾಲಕಿಯ ಹೇಳಿಕೆ ಹಾಗೂ ಇತರ ಸಾಂದರ್ಭಿಕ ಸಾಕ್ಷಿಗಳನ್ನು ಪರಿಗಣಿಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಕಠಿಣ ಜೈಲು ಶಿಕ್ಷೆ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ವಿಶೇಷ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts