More

    ಎರಡನೇ ದಿನವೂ ಶೂನ್ಯ ಪ್ರಕರಣ, ಉಡುಪಿಯಲ್ಲಿ 34 ಜನರ ವರದಿ ನೆಗೆಟಿವ್

    ಉಡುಪಿ: ಜಿಲ್ಲೆಯಲ್ಲಿ ಸತತ 2ನೇ ದಿನವಾದ ಬುಧವಾರವೂ ಕರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ.
    34 ಮಂದಿಯ ವರದಿ ನೆಗೆಟಿವ್ ಬಂದಿದೆ. 122 ಮಂದಿ ವರದಿ ಬರಲು ಬಾಕಿ ಇದೆ. 123 ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, 7 ಮಂದಿ ಐಸೋಲೇಷನ್ ವಾರ್ಡ್‌ಗೆ ದಾಖಲಾಗಿದ್ದಾರೆ. 19 ಮಂದಿ ಬಿಡುಗಡೆಯಾಗಿದ್ದಾರೆ. 118 ಮಂದಿ 28 ದಿನದ ಹಾಗೂ 2 ಮಂದಿ 14 ದಿನದ ನಿಗಾ ಅವಧಿ ಪೂರೈಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 946 ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿ, 486 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಬಿಡುಗಡೆಯಾದ 93 ಮಂದಿ ಸೇರಿ ಒಟ್ಟು 459 ಮಂದಿ ಗುಣವಾಗಿದ್ದಾರೆ.

    ದ.ಕ ಜಿಲ್ಲೆಯಲ್ಲಿ ನಾಲ್ವರಿಗೆ ಸೋಂಕು
    ಮಂಗಳೂರು: ದ.ಕ ಜಿಲ್ಲೆಯಲ್ಲಿ ಬುಧವಾರ ನಾಲ್ಕು ಮಂದಿಗೆ ಕರೊನಾ ಸೋಂಕು ದೃಢಪಟ್ಟಿದೆ.
    ಇವರಲ್ಲೊಬ್ಬರು ಉಡುಪಿ ಜಿಲ್ಲೆ ಕಾರ್ಕಳದವರಾಗಿದ್ದು ಜೂ.2ರಂದು ಸೌದಿ ಅರೇಬಿಯಾದಿಂದ ಆಗಮಿಸಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಗಂಟಲು ದ್ರವ ಪರೀಕ್ಷೆಯಲ್ಲಿ ಕರೊನಾ ದೃಢಪಟ್ಟಿದೆ. 60 ವರ್ಷದ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ಸಾಗರದವರಾಗಿದ್ದು ಜೂ.7ರಂದು ಸೌದಿ ಅರೇಬಿಯಾದಿಂದ ಆಗಮಿಸಿ ಖಾಸಗಿ ಹೋಟೆಲ್‌ನಲ್ಲಿ ನಿಗಾವಣೆಯಲ್ಲಿದ್ದರು. ಅವರಿಗೆ ಕರೊನಾ ದೃಢಪಟ್ಟಿದ್ದು ವೆನ್ಲಾಕ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಅದೇ ರೀತಿ 30ವರ್ಷದ ಯುವಕ ಹಾಗೂ 40ರ ಗಂಡಸು ಮಹಾರಾಷ್ಟ್ರದಿಂದ ಬಂದಿದ್ದು ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ಮೂಡುಬಿದಿರೆಗೆ ಆಗಮಿಸಿದ್ದು, ಅವರ ಗಂಟಲ ದ್ರವ ಮಾದರಿ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುತ್ತದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಒಟ್ಟು 94 ಕೋವಿಡ್ ರೋಗಿಗಳು ದಾಖಲಾಗಿದ್ದು 93 ಮಂದಿಯ ಆರೋಗ್ಯ ಸ್ಥಿತಿ ತೃಪ್ತಿಕರ. ಒಬ್ಬರು 50ರ ಗಂಡಸು ಅಧಿಕ ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರ 28ರ ಮಹಿಳೆ ಹಾಗೂ 17ರ ಬಾಲಕ ಕೋವಿಡ್ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

    ಕಾಸರಗೋಡಿನಲ್ಲಿಯೂ ಪ್ರಕರಣವಿಲ್ಲ
    ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ ಯಾವುದೇ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. 9 ಮಂದಿ ಗುಣಮುಖರಾಗಿ ತೆರಳಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 102 ಮಂದಿ ಸೋಂಕು ಬಾಧಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 9125 ಮಂದಿ ನಿಗಾದಲ್ಲಿದ್ದಾರೆ. 335 ಮಂದಿಯ ಸ್ಯಾಂಪಲ್ ಬುಧವಾರ ತಪಾಸಣೆಗೆ ಕಳುಹಿಸಲಾಗಿದೆ. 610 ಮಂದಿಯ ಫಲಿತಾಂಶ ಲಭಿಸಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts