ಸ್ವತಃ ಟ್ರ್ಯಾಕ್ಟರ್ ಚಲಾಯಿಸಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿದ ಕೃಷಿ ಸಚಿವ

1127561
Published on

ಉಡುಪಿ: ಹಡಿಲು ಭೂಮಿ ಕೃಷಿ ಅಂದೋಲನದಡಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ನಡೆಯುತ್ತಿರುವ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್​ ಚಾಲನೆ ನೀಡಿದರು.

ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 110 ಎಕರೆ ಹಡಿಲು ಭೂಮಿಯಲ್ಲಿ ಕೃಷಿ ಮಾಡಲಾಗುತ್ತಿದೆ. ಈ ಕಾರ್ಯಕ್ಕರ ಶನಿವಾರ ಚಾಲನೆ ನೀಡಿದ ಸಚಿವ ಬಿ.ಸಿ. ಪಾಟೀಲ್, ಸ್ವತಃ ಟ್ರ್ಯಾಕ್ಟರ್ ಚಲಾಯಿಸಿ ಗಮನ ಸೆಳೆದರು.

ಶಾಸಕ ರಘುಪತಿ ಭಟ್ ಸಹ ಉಪಸ್ಥಿತರಿದ್ದರು. ನೇಜಿ ನೇಡುವ ಮೂಲಕ ರಘುಪತಿ ಭಟ್​ ಯಂತ್ರಕ್ಕೆ ಚಾಲನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net