13ರಂದು ಸ್ವರ್ಣ ಗೋಪುರ ಕಾರ್ಯಕ್ಕೆ ಚಾಲನೆ

Latest News

PHOTOS| ಸರ್ಜಾ ಕುಟುಂಬದಲ್ಲಿ ಗರಿಗೆದರಿದ ಮದುವೆ ಸಂಭ್ರಮ: ಭಾವಿ ಪತ್ನಿಯ ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಧ್ರುವ!

ಬೆಂಗಳೂರು: ಬಹುಕಾಲದ ಗೆಳತಿ ಪ್ರೇರಣಾರನ್ನು ನಟ ಧ್ರುವ ಸರ್ಜಾ ಅವರು ಭಾನುವಾರ ನಡೆಯಲಿರುವ ಶುಭ ವಿವಾಹ ಮುಹೂರ್ತದಲ್ಲಿ ವರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಜಾ...

ಮಾದಪ್ಪನ ಸನ್ನಿಧಿಯಲ್ಲಿ ಸಂಗ್ರಹವಾಯ್ತು ಭಾರಿ ಮೊತ್ತ: ಬೆಟ್ಟದೊಡೆಯನ ಹುಂಡಿಗೆ ಹರಿದುಬಂತು ಕೋಟಿ ರೂಪಾಯಿ ಕಾಣಿಕೆ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ತೀರ್ಥಕ್ಷೇತ್ರ ಮಲೆಮಹದೇಶ್ವರಬೆಟ್ಟದ ಹುಂಡಿಯಲ್ಲಿ ಪ್ರತಿ ತಿಂಗಳು ದಾಖಲೆಯ ಮೊತ್ತ ಸಂಗ್ರಹವಾಗುತ್ತಿದೆ. ಎಪ್ಪತ್ತೇಳು ಮಲೆಗಳ ಒಡೆಯ ಮಾದಪ್ಪ ಮತ್ತೆ ಕೋಟ್ಯಾಧೀಶರಾಗಿದ್ದಾರೆ....

ಅಸಲಿ ಪೊಲೀಸರಿಗೆ ಸೆರೆಸಿಕ್ಕ ನಕಲಿ ಅಧಿಕಾರಿ: ಉದ್ಯಮಿಗೆ ಬೆದರಿಸಿ 24 ಲಕ್ಷ ರೂ. ಸುಲಿಗೆ, ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಬೆಂಗಳೂರು: ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಬೆದರಿಸಿ ಲಕ್ಷಾಂತರ ರೂ. ಸುಲಿಗೆ ಮಾಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಚ್​ಎಎಲ್...

ಯುವಕನ ಕೊಲೆ ಮಾಡಿದ್ದ ದಂಪತಿ ಬೆಳಗಾವಿಯಲ್ಲಿ ಸೆರೆ

ಆನೇಕಲ್: ಖಾಸಗಿ ಸಂಸ್ಥೆಯ ಉದ್ಯೋಗಿ ಭದ್ರಾವತಿಯ ಕಿರಣ್ ಕುಮಾರ್ (25) ಕೊಲೆ ಪ್ರಕರಣ ಭೇದಿಸಿರುವ ಜಿಗಣಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆಯ ಸುರೇಖಾ (38)...

ತನ್ನದಲ್ಲದ ತಪ್ಪಿಗೆ ದಂಡ ಕಟ್ಟಿದ ಟೆಕ್ಕಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ 4 ವರ್ಷ ಕಾರು ಓಡಿಸಿದ್ದ, ಆರ್​ಟಿಒ ವಶದಲ್ಲಿ ಉದ್ಯಮಿ

ಬೆಂಗಳೂರು: ಪರಿಚಿತರೊಬ್ಬರ ಬೆನ್ಜ್ ಕಾರಿನ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು 7 ವರ್ಷಗಳಿಂದ 27 ಲಕ್ಷ ರೂ. ತೆರಿಗೆ ವಂಚಿಸಿ ಓಡಾಡುತ್ತಿದ್ದ ಮರ್ಸಿಡೀಸ್...

ವಿಜಯವಾಣಿ ಸುದ್ದಿಜಾಲ ಉಡುಪಿ

ಕೃಷ್ಣ ಮಠದ ಗರ್ಭಗುಡಿ ಮೇಲ್ಛಾವಣಿಗೆ ಸ್ವರ್ಣ ಹೊದಿಕೆ ಅಳವಡಿಸುವ ಕಾಮಗಾರಿಗೆ ಮಾ.13ರಂದು 12.10ರ ಮುಹೂರ್ತದಲ್ಲಿ ಶಿಖರಾವರೋಹಣ ಮೂಲಕ ಚಾಲನೆ ದೊರೆಯಲಿದೆ ಎಂದು ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾ.12ರಂದು ನವೀಕರಣ ಪೂರ್ವಭಾವಿ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು, 13ರಿಂದ ಮೇಲ್ಛಾವಣಿ ಕೆಲಸ ಆರಂಭವಾಗಲಿದೆ. ಭಕ್ತರಿಗೆ ಬ್ರಹ್ಮಕಲಶದವರೆಗೆ ಮುಷ್ಟಿಕಾಣಿಕೆ ಸಲ್ಲಿಸಲು ಅವಕಾಶವಿದೆ. ಕೃಷ್ಣ ದೇವರ ನಿತ್ಯದ ಪೂಜೆಯಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ. ಉತ್ಸವಾದಿಗಳು ಯಥಾಪ್ರಕಾರ ನಡೆಯುತ್ತದೆ. ಬೆಳಗ್ಗೆ 11ರ ಒಳಗೆ ಮಹಾಪೂಜೆ ನಡೆದು ಗರ್ಭಗೃಹದ ಬಾಗಿಲು ಮುಚ್ಚಿದ ಬಳಿಕ ಕೆಲಸ ಆರಂಭವಾಗಲಿದೆ. ಸಾಯಂಕಾಲ 5 ಗಂಟೆಗೆ ಕೆಲಸ ಮುಗಿದ ಬಳಿಕ ರಾತ್ರಿಪೂಜೆ ನಡೆಯಲಿದೆ. ಅವಶ್ಯವಿದ್ದರೆ ರಾತ್ರಿ ವೇಳೆಯೂ ಕೆಲಸ ಮುಂದುವರಿಯಲಿದೆ ಎಂದರು.

ವಾಸ್ತುತಜ್ಞ ಸುಬ್ರಹ್ಮಣ್ಯ ಅವಧಾನಿ, ಚಿನ್ನದ ಗೋಪುರ ನಿರ್ಮಾಣ ಉಸ್ತುವಾರಿ ಯು. ವೆಂಕಟೇಶ ಶೇಟ್ ಉಪಸ್ಥಿತರಿದ್ದರು.

2.5 ಸಾವಿರ ಚದರಡಿಗೆ ಬಂಗಾರ: 100 ಕೆ.ಜಿ. ಬಂಗಾರ, 800 ಕೆ.ಜಿ. ಬೆಳ್ಳಿ, 200 ಕೆ.ಜಿ. ತಾಮ್ರದಿಂದ ಗರ್ಭಗುಡಿಯ 2.5 ಸಾವಿರ ಚದರಡಿಯ ಛಾವಣಿಗೆ ಬಂಗಾರ ಹೊದಿಸಲಾಗುತ್ತದೆ. ಈಗಾಗಲೇ ಶೇ.70ರಷ್ಟು ಸಂಪನ್ಮೂಲ ಸಂಗ್ರಹವಾಗಿದೆ. ಸಾಗುವಾನಿ ಮರ ಹಲಗೆಯ ಮೇಲೆ ತಾಮ್ರದ ಹೊದಿಕೆ ಅಳವಡಿಸಲಾಗುವುದು. ಅದರಲ್ಲಿ ಸರ್ವಮೂಲ ಗ್ರಂಥ ಹಾಗೂ ಹಂಸ ಮಂತ್ರವನ್ನು ಲೇಸರ್ ಪ್ರಿಂಟ್ ಹಾಕಿಸಲಾಗುವುದು. ಬಳಿಕ ಬೆಳ್ಳಿಯ ಹಾಳೆಯ ಮೇಲೆ ಬಂಗಾರವನ್ನು ಅಚ್ಚುಹಾಕಿಸಿ ಗೋಪುರ ನಿರ್ಮಿಸಲಾಗುತ್ತಿದೆ. 1 ಚದರಡಿಗೆ 40 ಗ್ರಾಂ ಬಂಗಾರದ ಅಗತ್ಯವಿದ್ದು, 20 ಗ್ರಾಂ ಬಂಗಾರದ 5 ಸಾವಿರ ಶೀಟ್‌ಗಳನ್ನು ಛಾವಣಿಗೆ ಅಳವಡಿಸಲಾಗುವುದು ಎಂದು ಪಲಿಮಾರು ಶ್ರೀಗಳು ತಿಳಿಸಿದರು.

ಎನ್‌ಐಟಿಕೆಯಿಂದ ಪರೀಕ್ಷೆ: 23 ಕ್ಯಾರೆಟ್ ಬಂಗಾರದ ಹಾಳೆಗಳನ್ನು ತಯಾರಿಸಲಾಗಿದ್ದು, ಗೋಪುರಕ್ಕೆ ಅಳವಡಿಸುವ ಮುನ್ನ ಎನ್‌ಐಟಿಕೆಯ ಪರಿಣತರಿಂದ ಗುಣಮಟ್ಟದ ಪರೀಕ್ಷೆ ನಡೆಯಲಿದೆ ಎಂದು ಶ್ರೀಗಳು ಹೇಳಿದರು.

- Advertisement -

Stay connected

278,673FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...