More

    ಅಯೋಧ್ಯೆ ಶ್ರೀರಾಮ ಮಂದಿರಕ್ಕಾಗಿ ಉಡುಪಿಯ ಪವಿತ್ರ ಮೃತ್ತಿಕೆ ರವಾನೆ

    ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣ ರಾಮ ಮಂದಿರದ ನಿರ್ಮಾಣ ಕಾರ್ಯಕ್ಕೆ ಆ.5ರಂದು ಶಿಲಾನ್ಯಾಸ ಕಾರ್ಯಕ್ರಮ ನಡೆಸಲು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರ್ಧರಿಸಿದ್ದು, ಮಂದಿರದ ತಳಭಾಗದಲ್ಲಿ ದೇಶದ ನೂರಾರು ನದಿ, ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು ಪೇರಿಸಲು ವಿಶ್ವ ಹಿಂದು ಪರಿಷತ್ ಸಂಕಲ್ಪಕೈಗೊಂಡಿದೆ.

    ಈ ಹಿನ್ನಲೆಯಲ್ಲಿ ಸೋಮವಾರ ಕೃಷ್ಣ ನಗರಿ ಉಡುಪಿಯ ಪವಿತ್ರ ಮಣ್ಣಿಗೆ ಪರ್ಯಾಯ ಅದಮಾರು ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಕೃಷ್ಣ ದೇವರ ಮುಂಭಾಗದಲ್ಲಿ ಗಂಧ ಪ್ರಸಾದ, ನಿರ್ಮಾಲ್ಯವಿಟ್ಟು ಮಂಗಳಾರತಿ ಬೆಳಗಿ ವಿಹಿಂಪ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

    ಇದನ್ನೂ ಓದಿ; ಅಯೋಧ್ಯೆ ಕುರಿತು ಅರ್ಜಿ ಸಲ್ಲಿಸಿ ಒಂದೊಂದು ಲಕ್ಷ ದಂಡ ಹಾಕಿಸಿಕೊಂಡರು!

    ಕಾರ್ಯಕರ್ತರು ರಥಬೀದಿಯಲ್ಲಿ ರಾಮನಾಮ ಸ್ಮರಣೆಯೊಂದಿಗೆ ಪ್ರದಕ್ಷಿಣೆ ಬಂದು ಅನಂತೇಶ್ವರ ದೇವಳಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಹಿತ್ತಾಳೆಯ ಕರಂಡಕದಲ್ಲಿ ಮೃತ್ತಿಕೆಯನ್ನು ತುಂಬಿಸಿ ಕಳಿಸಿಕೊಡಲಾಯಿತು. ಉಡುಪಿ ಮಾತ್ರವಲ್ಲದೆ ದಕ್ಷಿಣ ಭಾರತದ ಅನೇಕ ಕ್ಷೇತ್ರಗಳ ಹಾಗೂ ನದಿಗಳ ಮೃತ್ತಿಕೆಯನ್ನು ಸಂಗ್ರಹಿಸಲಾಗುತ್ತಿದೆ.

    ವಿಹಿಂಪ ಜಿಲ್ಲಾಧ್ಯಕ್ಷ  ಪಿ. ವಿಷ್ಣುಮೂರ್ತಿ ಆಚಾರ್ಯ, ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಪ್ರಾಂತ ಸಹಸಂಚಾಲಕ ಕೆ.ಆರ್. ಸುನಿಲ್, ಮಠದ ವ್ಯವಸ್ಥಾಪಕ ಗೋವಿಂದರಾಜ್, ವಿದ್ವಾನ್ ರಾಮನಾಥ ಆಚಾರ್ಯ, ವಾಸುದೇವ ಭಟ್ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.

    ಇದನ್ನೂ ಓದಿ; ರಾಮಮಂದಿರದ ಗರ್ಭಗುಡಿಯಲ್ಲಿ 40 ಕೆಜಿ ತೂಕದ ಬೆಳ್ಳಿಯ ಹಾಸುಗಲ್ಲು; ಆ.3ರಿಂದ ಧಾರ್ಮಿಕ ಕಾರ್ಯಕ್ರಮ

    ಶಿಲಾನ್ಯಾಸ ಸಮಾರಂಭಕ್ಕೆ ಪೇಜಾವರ ಶ್ರೀ ಗೈರು: ಅಯೋಧ್ಯೆಯಲ್ಲಿ ಆ .5 ರಂದು ನಡೆಯಲಿರುವ ಶಿಲಾನ್ಯಾಸ ಸಮಾರಂಭದಲ್ಲಿ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದಕ್ಷಿಣ ಭಾರತದ ಏಕೈಕ ಸದಸ್ಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸುತ್ತಿಲ್ಲ. ಶ್ರೀಗಳು ನೀಲಾವರದಲ್ಲಿ ಚಾತುರ್ಮಾಸ್ಯ ವ್ರತ ದೀಕ್ಷೆ ಹಿನ್ನೆಲೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಶ್ರೀಮಠ ತಿಳಿಸಿದೆ.

    ಸುಶಾಂತ್​ ಸಿಂಗ್​ ಆತ್ಮಹತ್ಯೆ ತನಿಖೆಗೆ ರೋಚಕ ತಿರುವು; ನಟನ ಖಾತೆಯಲ್ಲಿದ್ದ ಹಣ ಖರ್ಚು ಮಾಡುತ್ತಿದ್ದುದು ಯಾರು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts