More

    ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅಧಿಕಾರ ಸ್ವೀಕಾರ

     ಉಡುಪಿ: ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಎನ್.ವಿಷ್ಣುವರ್ಧನ್ ಶುಕ್ರವಾರ ಬನ್ನಂಜೆ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
    ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿದ್ದ ನಿಶಾ ಜೇಮ್ಸ್ ವರ್ಗಾವಣೆಗೊಂಡು ಬೆಂಗಳೂರಿಗೆ ತೆರಳಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷಕ ಕುಮಾರಚಂದ್ರ ಅವರು ವಿಷ್ಣುವರ್ಧನ್‌ರನ್ನು ಬರ ಮಾಡಿಕೊಂಡು, ಅಧಿಕಾರ ಹಸ್ತಾಂತರಿಸಿದರು.
    2005ರಲ್ಲಿ ರಾಜ್ಯ ಪೊಲೀಸ್ ಇಲಾಖೆ ಸೇವೆ ಸೇರಿದ ವಿಷ್ಣುವರ್ಧನ್, ಕೊಡಗು ವಿರಾಜಪೇಟೆಯಲ್ಲಿ ಡಿವೈಎಸ್‌ಪಿಯಾಗಿ ಕರ್ತವ್ಯ ಆರಂಭಿಸಿದ್ದರು. 2015ರಲ್ಲಿ ಐಪಿಎಸ್ ಹುದ್ದೆಗೆ ಬಡ್ತಿ ಪಡೆದು, 2016, 2017ರಲ್ಲಿ ಉಡುಪಿ ಹೆಚ್ಚುವರಿ ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬೆಂಗಳೂರು ನಾಗರಿಕ ಹಕ್ಕು ನಿರ್ದೇಶನಾಲಯ, ಕಾರ್ಕಳದಲ್ಲಿ ನಕ್ಸಲ್ ನಿಗ್ರಹ ಪಡೆ, ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಎಎಸ್ಪಿ, ಮಂಗಳೂರು, ಮೈಸೂರು ನಗರದಲ್ಲಿ ಕ್ರೈಂ ಮತ್ತು ಟ್ರಾಫಿಕ್ ಡಿಸಿಪಿ, ಬೆಂಗಳೂರು ನಗರ ಡಿಸಿಪಿ (ಆಡಳಿತ)ಯಾಗಿ ಕಾರ್ಯನಿರ್ವಹಿಸಿದ್ದರು. ಉಡುಪಿ ಎಸ್ಪಿಯಾಗಿದ್ದ ನಿಶಾ ಜೇಮ್ಸ್ ಬೆಂಗಳೂರು ನಗರ ಡಿಸಿಪಿ (ಆಡಳಿತ)ಯಾಗಿ ಕಾರ್ಯನಿರ್ವಹಿಸುವರು.

     ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕಾರ್ಯ ಯೋಜನೆ ರೂಪಿಸಲಾಗುವುದು. ಮೊದಲಿಗೆ ಅಧಿಕಾರಿಗಳ ಸಭೆ ಕರೆದು ಎಲ್ಲ ವಿಚಾರಗಳ ಬಗ್ಗೆ ತಿಳಿದುಕೊಳ್ಳುತ್ತೇನೆ. ಉಡುಪಿ ಕೃಷ್ಣಮಠದಲ್ಲಿ ಪರ್ಯಾಯೋತ್ಸವ ನಡೆಯಲಿರುವುದರಿಂದ ಅದರ ಬಂದೊಬಸ್ತ್ ಮತ್ತು ವ್ಯವಸ್ಥೆಯ ಬಗ್ಗೆ ಆದ್ಯತೆಯ ಮೇರೆಗೆ ಗಮನ ಹರಿಸುತ್ತೇನೆ.
    – ವಿಷ್ಣುವರ್ಧನ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts