24.7 C
Bangalore
Sunday, December 15, 2019

ಉಡುಪಿಯಲ್ಲಿ ಕೃಷ್ಣಾಷ್ಟಮಿ ಸಂಭ್ರಮ

Latest News

ನೀರಿನ ಹೊಂಡಕ್ಕೆ ಬಿದ್ದ ಯುವತಿ ರಕ್ಷಣೆ ವಿಡಿಯೋ ವೈರಲ್

ವಿಜಯವಾಣಿ ಸುದ್ದಿಜಾಲ ರಾಯಚೂರು ಖಾಸಗಿ ನಿವೇಶನ ನಿರ್ಮಾಣಕ್ಕಾಗಿ ತೆಗೆದ ಗುಂಡಿಯಲ್ಲಿ ಆಯತಪ್ಪಿ ಬಿದ್ದಿದ್ದ ಬಾಲಕಿ ಯನ್ನು ಯುವಕನೊಬ್ಬ ರಕ್ಷಣೆ ಮಾಡಿದ ವಿಡಿ ಯೋ ಸಾಮಾಜಿಕ...

ವಿಶ್ವಸುಂದರಿ ವಿಜೇತೆಗೆ ಕೊನೆಯ ಪ್ರಶ್ನೋತ್ತರ ಸುತ್ತಿನಲ್ಲಿ ಕೇಳಿದ ಪ್ರಶ್ನೆಗಾಳವುವು? ಜಮೈಕಾ ಬ್ಯೂಟಿಯ ಉತ್ತರ ಹೇಗಿತ್ತು?

ಲಂಡನ್​: 2019ನೇ ಸಾಲಿನ ವಿಶ್ವಸುಂದರಿ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆಯಾಗುವ ಮೂಲಕ ಜಮೈಕಾದ ಟೋನಿ ಅನ್​ ಸಿಂಗ್​ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸ್ಪರ್ಧೆಯ ಕೊನೆಯ ಪ್ರಶ್ನೋತ್ತರ...

ಶಿವಸೇನೆ ಕೈಯಲ್ಲಿರುವ ಗೃಹ ಇಲಾಖೆ ಮೇಲೆ ಎನ್​ಸಿಪಿ ಕಣ್ಣು; ಅಜಿತ್​ ಪವಾರ್​ಗೆ ಜವಾಬ್ದಾರಿ ವಹಿಸುವ ಪ್ರಯತ್ನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್​ ನೇತೃತ್ವದ ಸರ್ಕಾರ ರಚನೆಯಾಗಿದ್ದರೂ ಇನ್ನು ಸಚಿವ ಸಂಪುಟ ರಚನೆಯಾಗಿಲ್ಲ. ಸದ್ಯ ಯಾವ ಪಕ್ಷಗಳಿಗೆ ಯಾವ ಖಾತೆ ಎಂಬುದನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

ಸ್ಮಾರಕದ ಮೇಲೆ ಕುಳಿತ ಪಾರಿವಾಳದಲ್ಲಿ ನೆಚ್ಚಿನ ನಟ ದಿ.ಅಂಬರೀಶ್​ ಅವರನ್ನು ಕಂಡ ಅಭಿಮಾನಿಗಳು

ಮಂಡ್ಯ: ರೆಬಲ್​ಸ್ಟಾರ್​ ದಿ.ಅಂಬರೀಶ್​ ಅವರ ಸ್ಮಾರಕವನ್ನು ಯಲಿಯೂರು ಗ್ರಾಮದಲ್ಲಿ ಪುತ್ರ ಅಭಿಷೇಕ್​ ಅಂಬರೀಶ್​ ಲೋಕಾರ್ಪಣೆ ಮಾಡಿದರು. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಅಭಿಮಾನಿಗಳು ದಿ....

ವಾಣಿಜ್ಯ ಬಾಂಕ್​ಗಳ ನಿಯಮಗಳನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಆರ್​ಬಿಐ ಚಿಂತನೆ

ನವದೆಹಲಿ: ವಾಣಿಜ್ಯ ಬಾಂಕ್​ಗಳಲ್ಲಿ ಅಳವಡಿಸಲಾಗಿರುವ ಜಾರಿ ನೀತಿ ಮತ್ತು ಚೌಕಟ್ಟನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ(ಎನ್​ಬಿಎಫ್​ಸಿ) ಮತ್ತು ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಭಾರತೀಯ ರಿಸರ್ವ್​...

ಉಡುಪಿ: ಪರ್ಯಾಯ ಪಲಿಮಾರು ಮಠ, ಕೃಷ್ಣಮಠದ ಆಶ್ರಯದಲ್ಲಿ ಭಾನುವಾರ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸ ಸಂಬಂಧಿ ಚಟುವಟಿಕೆಗಳಿಗೆ ಸಂಭ್ರಮದ ಚಾಲನೆ ನೀಡಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು. ದೇಶದಲ್ಲಿ ಧರ್ಮ ಪ್ರತಿಷ್ಠಾಪನೆ ಮಾಡುವಲ್ಲಿ ಕೃಷ್ಣನ ಪಾತ್ರ ಪ್ರಮುಖವಾಗಿದೆ. ಭಗವದ್ಗೀತೆ, ಮಹಾಭಾರತ ಹಾಗೂ ಕೃಷ್ಣನ ಸಂದೇಶಗಳನ್ನು ಇವತ್ತಿನ ರಾಜಕಾರಣದಲ್ಲಿ ಪ್ರತಿ ಹಂತದಲ್ಲಿ ಪಾಲಿಸುವ ಅನಿವಾರ್ಯ ಪರಿಸ್ಥಿತಿಯಲ್ಲಿ ನಾವಿದ್ದೇವೆ ಎಂದು ಅವರು ಅಭಿಪ್ರಾಯಪಟ್ಟರು.

ಮಕ್ಕಳಲ್ಲಿ ಕೃಷ್ಣನನ್ನು ಕಾಣುವ ಮೂಲಕ ತಂದೆ-ತಾಯಂದಿರು ಭಕ್ತಿಯನ್ನು ಸಾದರಪಡಿಸುತ್ತಾರೆ. ಜೀವನದಲ್ಲಿ ಅಂತಿಮವಾಗಿ ಕೃಷ್ಣನ ಪಾದದ ಮುಂದೆ ನಮ್ಮ ತಪ್ಪು-ಒಪ್ಪುಗಳನ್ನು ಸಮರ್ಪಿಸಬೇಕು. ಗೋವರ್ಧನಗಿರಿಯನ್ನು ಎತ್ತಿ ವೃಂದಾವನವನ್ನು ಕಾಪಾಡಿದಂತೆ ಕೃಷ್ಣ ಪ್ರಕೃತಿ ವಿಕೋಪದಿಂದ ನಾಡಿಗೆ ಒದಗಿರುವ ಸಂಕಷ್ಟದಿಂದ ಪಾರು ಮಾಡಬೇಕು ಎಂದರು.

ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು. ಅಭ್ಯಾಗತರಾಗಿ ಮಾಜಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ವಿದಾನಸಭಾದ ಸದಸ್ಯ ಭೋಜೇಗೌಡ, ಶಾಸಕ ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಎನ್.ಎಂ.ಪಿ.ಟಿ. ಅಧ್ಯಕ್ಷ ವೆಂಕಟರಮಣ ಅಕ್ಕರಾಜು ಭಾಗವಹಿಸಿದ್ದರು.

ಎಲ್ಲರೂ ಮುದ್ದಿಸಿದ ದೇವರು ಕೃಷ್ಣ: ಆಶೀರ್ವಚನ ನೀಡಿದ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ, ಕೃಷ್ಣನನ್ನು ಮಗುವಿನಿಂದ ವೃದ್ಧರವರೆಗೆ ಎಲ್ಲರನ್ನೂ ಸಂತೋಷಗೊಳಿಸಿದ್ದಾನೆ. ಎಲ್ಲರೂ ಮುದ್ದಿಸಿದ ದೇವರು ಕೃಷ್ಣ. ಅತಿವೃಷ್ಟಿಯಿಂದ ಆತನೇ ನಾಡನ್ನು ಕಾಪಾಡಲಿ ಎಂದರು. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೃಷ್ಣ ಮಠದ ಅಭಿವೃದ್ಧಿ ಕಾರ್ಯಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ 3 ಕೋಟಿ ರೂ. ಬಿಡುಗಡೆ ಮಾಡಿದ್ದರು. ಅವರಿಗೆ ಕೃಷ್ಣನ ಅನುಗ್ರಹ ಸಿಗಲು ಪ್ರಾರ್ಥಿಸುತ್ತೇನೆ ಎಂದರು.

 ಸನ್ಮಾನ: ಶಿಕ್ಷಣ, ಇತಿಹಾಸ ತಜ್ಞ ಪ್ರೊ.ಪಾದೂರು ಶ್ರೀಪತಿ ತಂತ್ರಿ, ಕಲಾವಿದರಾದ ಶಮಾಕೃಷ್ಣ, ಸಾರಿಗೆ ಉದ್ಯಮಿ ಕೃಷ್ಣಾನಂದ ಚಾತ್ರ, ನಿಟ್ಟೆ ವಿದ್ಯಾಲಯದ ಡಾ.ಅನಂತಪದ್ಮನಾಭ ಆಚಾರ್ಯ ಮತ್ತು ಜಿ.ಎಂ.ವಿದ್ಯಾನಿಕೇತನ ಹಾರಾಡಿಯ ಪ್ರಕಾಶ್ಚಂದ್ರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕೃಷ್ಣ ಎಲ್ಲರನ್ನೂ ಆಕರ್ಷಿಸಿದವನು. ಹೈದರಾಲಿ ಕೃಷ್ಣನ ರಾಜಕೀಯ ಮುತ್ಸದ್ಧಿತನವನ್ನು ಕೇಳಿ ಮೆಚ್ಚಿಕೊಂಡಿದ್ದ ಎಂಬ ಉಲ್ಲೇಖವಿದೆ. 1300 ವರ್ಷಗಳಿಂದ ಕೃಷ್ಣಾಷ್ಟಮಿಯನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಮೊದಲಿಗೆ ಗುಜರಾತ್‌ನಲ್ಲಿ ಈ ಪರಂಪರೆ ಬೆಳೆದಿತ್ತು. ಕೃಷ್ಣನ ಗೀತೆಯ ಸಂದೇಶ ಅಂತರ್ಗತ ಮಾಡಿಕೊಂಡರೆ ಮಾತ್ರ ಭಾರತದ ಉನ್ನತಿಗೆ ಏರಲು ಸಾಧ್ಯ.
ಪ್ರೊ.ಪಾದೂರು ಶ್ರೀಪತಿ ತಂತ್ರಿ ಶಿಕ್ಷಣ ತಜ್ಞ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...