More

    ಒಂದೇ ದಿನ 10 ಮಂದಿ ಸಾವು

    ಉಡುಪಿ: ಜಿಲ್ಲೆಯಲ್ಲಿ ಗುರುವಾರ 217 ಮಂದಿಗೆ ಕೋವಿಡ್- 19 ಸೋಂಕು ದೃಢಪಟ್ಟಿದ್ದು, 10 ಮಂದಿ ಮೃತಪಟ್ಟಿದ್ದಾರೆ.

    ಹಲವು ರೋಗಗಳ ಜತೆಗೆ ಕರೊನಾ ಪಾಸಿಟಿವ್ ಹೊಂದಿದ್ದ ಕುಂದಾಪುರ ತಾಲೂಕಿನ 82 ಮತ್ತು 52 ವರ್ಷದ ಪುರುಷರು, ಉಡುಪಿಯಲ್ಲಿ 76, 70, 55 ಮತ್ತು 36 ವರ್ಷದ ಪುರುಷರು, ಬೈಂದೂರಿನ 75 ವರ್ಷದ ಪುರುಷ, ಬಾರ್ಕೂರಿನ 76 ವರ್ಷದ ಪುರುಷ, ಸಾಯ್ಬರಕಟ್ಟೆಯ 70 ವರ್ಷದ ಪುರುಷ, ಕಾರ್ಕಳದಲ್ಲಿ 75 ವರ್ಷದ ಪುರುಷ ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 54ಕ್ಕೆ ತಲುಪಿದೆ.

    ಗುರುವಾರ ಪತ್ತೆಯಾದ ಸೋಂಕಿತರಲ್ಲಿ ಉಡುಪಿಯ 90, ಕುಂದಾಪುರದ 81, ಕಾರ್ಕಳದ 44 ಹಾಗೂ ಹೊರ ಜಿಲ್ಲೆಯ ಇಬ್ಬರು ಸೇರಿದ್ದಾರೆ. 34 ಮಂದಿ ಆಸ್ಪತ್ರೆಗಳಿಂದ, 51 ಮಂದಿ ಹೋಂ ಐಸೋಲೇಶನ್‌ನಿಂದ ಬಿಡುಗಡೆ ಹೊಂದಿದ್ದಾರೆ. 1054 ಆಸ್ಪತ್ರೆಯಲ್ಲಿ, 1099 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಹಿರಿಯ ಅಧಿಕಾರಿಗೆ ಸೋಂಕು: ಉಡುಪಿ ಜಿಲ್ಲೆಯಲ್ಲಿ ಕರೊನಾ ನಿಯಂತ್ರಣ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಯೊಬ್ಬರಿಗೆ ಪಾಸಿಟಿವ್ ಬಂದಿದೆ. ರೋಗ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ತಪಾಸಣೆ ನಡೆಸಿದ್ದು, ಗುರುವಾರ ಬಂದ ವರದಿಯಲ್ಲಿ ಸೋಂಕು ದೃಢವಾಗಿದೆ. ಹೋಮ್ ಐಸೊಲೇಶನ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬರುವುದರಿಂದ ಮರಣ ಅಧಿಕ
    ಉಡುಪಿ: ಕಳೆದ ವಾರದಿಂದ ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 145 ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, ಪ್ರಸ್ತುತ 2100 ಸಕ್ರಿಯ ಪ್ರಕರಣಗಳಿವೆ. 1000 ಮಂದಿ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‌ನಲ್ಲಿ ಮತ್ತು 1100 ಮಂದಿ ಹೋಂ ಐಸೋಲೇಶನ್‌ನಲ್ಲಿದ್ದಾರೆ.

    ಇದುವರೆಗೆ ಒಟ್ಟು 46 ಮರಣ ಸಂಭವಿಸಿದೆ. 15 ದಿನಗಳಿಂದ ಮರಣದ ಸಂಖ್ಯೆ ಅಧಿಕವಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದರು.

    ಬೆಡ್, ವೆಂಟಿಲೇಟರ್ ಮತ್ತು ಹೈಪ್ರೋ ಆಕ್ಸಿಜಿನ್ ಬೆಡ್‌ಗಳ ಕೊರತೆ ಇಲ್ಲ. ಪಾಸಿಟಿವ್ ಬಂದ ಕೊನೆಯ ಹಂತದಲ್ಲಿ ರೋಗಿಗಳು ಆಸ್ಪತ್ರೆಗೆ ದಾಖಲಾಗುತ್ತಿರುವುದರಿಂದ ಮರಣ ಅಧಿಕವಾಗಿದೆ. ಇದನ್ನು ತಪ್ಪಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸರ್ವೇಕ್ಷಣೆ ನಡೆಸಬೇಕಿದೆ. ಇದಕ್ಕಾಗಿ ಅಗತ್ಯ ಸಿಬ್ಬಂದಿ ನೇಮಿಸಿಕೊಳ್ಳಲು ಅನುಮತಿ ನೀಡುವಂತೆ ಮನವಿ ಮಾಡಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಬೊಮ್ಮಾಯಿ, ತುರ್ತು ಸಂದರ್ಭಗಳಲ್ಲಿ ಮಾತ್ರ ಆಂಟಿಜೆನ್ ಪರೀಕ್ಷಾ ಕಿಟ್‌ಗಳ ಬಳಕೆ ಮಾಡುವಂತೆ ಮತ್ತು ರೋಗ ಲಕ್ಷಣವಿರುವ ವ್ಯಕ್ತಿಗಳನ್ನು ಆರ್.ಟಿ. ಪಿ.ಸಿ.ಆರ್. ಮೂಲಕ ಪರೀಕ್ಷೆ ನಡೆಸುವಂತೆ ಸೂಚಿಸಿದರು. ಆರೋಗ್ಯ ಇಲಾಖೆಯಲ್ಲಿ ಸರ್ವೇಕ್ಷಣಾ ಸಿಬ್ಬಂದಿ ನೇಮಕ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts