More

    ಮತ್ತೆ ಪದವಿ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿ ಮುಂದೂಡಿದ ಜಿಲ್ಲಾಡಳಿತ

    ಮಂಗಳೂರು: ಒಂದು ಬಾರಿ ಮುಂದೂಡಲ್ಪಟ್ಟು ನಿನ್ನೆಯಷ್ಟೇ ಪ್ರಾರಂಭಗೊಂಡಿದ್ದ ಮಂಗಳೂರು ವಿವಿ ಪದವಿ ಪರೀಕ್ಷೆಗಳನ್ನು ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
    ಕಳೆದ ಏಪ್ರಿಲ್‌ನಲ್ಲಿ ಪ್ರಾರಂಭಗೊಂಡಿದ್ದ ಪದವಿ ಪರೀಕ್ಷೆಗಳನ್ನು ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಅವುಗಳನ್ನು ಆಗಸ್ಟ್ ಮೊದಲ ವಾರ ನಡೆಸಲು ತೀರ್ಮಾನಿಸಲಾಗಿದ್ದು ಮೊದಲ ದಿನವಾದ ಸೋಮವಾರ ಮೊದಲ ಪರೀಕ್ಷೆ ನಡೆದಿತ್ತು. 1, 3, 5 ಹಾಗೂ 7ನೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಗಸ್ಟ್ 2ರಿಂದ ಹಾಗೂ 1, 3ನೇ ಸೆಮಿಸ್ಟರ್ ಸ್ನಾತಕೋತ್ತರ ಪದವಿ ಪರೀಕ್ಷಗಳನ್ನು ಆ.5ರಿಂದ ನಡೆಸಲು ನಿರ್ಧರಿಸಲಾಗಿತ್ತು.
    ಆದರೆ ಈಗ ಕೋವಿಡ್‌ ಮತ್ತೆ ಹೆಚ್ಚಾಗುತ್ತಿದೆ. ಮಂಗಳೂರು ವಿಶ್ವಾವಿದ್ಯಾಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ಆಗಮಿಸುತ್ತಿದ್ದು, ನೆರೆಯ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ, ಸಂಭಾವ್ಯ ಅಪಾಯವನ್ನು ತಪ್ಪಿಸಲು ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮಂಗಳೂರು ವಿವಿ ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ಅದರಂತೆ ಪರೀಕ್ಷೆಗಳನ್ನು ಮುಂದೂಡಿ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು. ಅಲ್ಲದೆ ಮಂಗಳವಾರ ಆರಂಭಗೊಂಡ ಮೌಲ್ಯಮಾಪನ ಕಾರ್ಯವನ್ನೂ ಮುಂದೂಡಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಡಾ.ಪಿ.ಎಲ್‌.ಧರ್ಮ ವಿಜಯವಾಣಿಗೆ ತಿಳಿಸಿದ್ದಾರೆ.

    ಮತ್ತೆ ಪದವಿ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿ ಮುಂದೂಡಿದ ಜಿಲ್ಲಾಡಳಿತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts