

ಬೆಂಗಳೂರು: ವೈದ್ಯಕಿಯ, ದಂತ ವೈದ್ಯಕಿಯ ಮತ್ತು ಆಯುಷ್ ಕೋರ್ಸುಗಳಿಗೆ ಪ್ರವೇಶ ಬಯಸಿ ಈಗಾಗಲೇ 2024ರ ಯುಜಿಸಿಇಟಿ ಪರೀೆಗೆ ನೋಂದಣಿ ಮಾಡಿಕೊಂಡು, ಆನ್ಲೈನ್ ಅರ್ಜಿ ಸಲ್ಲಿಸಿರುವವರು ಈಗ ಯುಜಿ&ನೀಟ್ನಲ್ಲಿ ಅರ್ಹತೆ ಪಡೆದಿದ್ದಲ್ಲಿ ಅಂಥವರು ತಮ್ಮ ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೆ ತನ್ನ ಜಾಲತಾಣದಲ್ಲಿ ಪೋರ್ಟಲ್ ತೆರೆಯಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ತಿಳಿಸಿದೆ.
ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಆಧಾರದ ಮೇಲೆ ಅಭ್ಯರ್ಥಿಯ ಹೆಸರು, ರ್ಯಾಂಜ್, ಅಂಕ, ಅರ್ಹತೆಗಳ ಮಾಹಿತಿ ಪಡೆಯಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈಗ ಯುಜಿ ನೀಟ್ನಲ್ಲಿ ಅರ್ಹತೆ ಪಡೆದುಕೊಂಡಿದ್ದು, ಈವರೆಗೂ ಯುಜಿ&ಸಿಇಟಿಗೆ ನೋಂದಣಿ ಮಾಡಿಕೊಳ್ಳದೆ ಇರುವವರಿಗೂ ಆನ್ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಅವಕಾಶ ನೀಡಲಾಗುವುದು. ಅಭ್ಯರ್ಥಿಗಳು ದಾಖಲಿಸುವ ವಿವರಗಳನ್ನು ವೆಬ್&ಸರ್ವೀಸ್ ಮೂಲಕ ಆನ್ ಲೈನ್ ಮೂಲಕವೇ ಪರಿಶೀಲಿಸಲಾಗುವುದು. ಹೀಗಾಗಿ ಭೌತಿಕ ಪರಿಶೀಲನೆ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ವೈದ್ಯಕಿಯ, ದಂತ ವೈದ್ಯಕಿಯ ಮತ್ತು ಆಯುಷ್ ಕೋರ್ಸುಗಳ ಪ್ರವೇಶಕ್ಕೆ ಪ್ರಾಧಿಕಾರದಲ್ಲಿ ನೋಂದಣಿ ಮಾಡಿ, ಅರ್ಜಿ ಸಲ್ಲಿಸಿ, ಆನ್ಲೈನ್ ಕೌನ್ಸೆಲಿಂಗ್ನಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ನಮೂದಿಸುವ ಆಪ್ಶನ್ಸ್ (ಣಟಠಿಜಿಟ್ಞಠ) ಪರಿಗಣಿಸಿ, ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು. ಎಂಜಿನಿಯರಿಂಗ್ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳಿಗೆ ಏಕಕಾಲದಲ್ಲೆ ಆಪ್ಶನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಮತ್ತು ಜತೆಯಲ್ಲೆ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಅವರು ವಿವರಸಿದರು.
ಸಂಬಂಧ ವಿವಿಧ ಇಲಾಖೆಗಳು ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರಗಳನ್ನು ಕೆಇಎಗೆ ನೀಡಿದ ಬಳಿಕ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.