

ಬೆಂಗಳೂರು: ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವಕಾಶ ಕಲ್ಪಿಸಿದೆ. ಈ ಬಾರಿ ಪ್ರವೇಶ ಪತ್ರದ ಜತೆಗೆ ಮಾದರಿ ಒಎಂಆರ್ ಕೂಡ ನೀಡುತ್ತಿರುವುದು ಅಭ್ಯಾಸದ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಅಭ್ಯರ್ಥಿಗಳು, ಕೆಇಎ ವೆಬ್‌ನೈಡ್‌ನಲ್ಲಿ ಯುಜಿಸಿಇಟಿ-25 ಪ್ರವೇಶ ಪತ್ರ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ ತಮ್ಮ ಲಾಗಿನ್ ಐಡಿ ಸಂಖ್ಯೆ, ಹೆಸರು ದಾಖಲಿಸುವುದರ ಮೂಲಕ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ಓಟಿಪಿ ಮತ್ತು ಮುಖಚಹರೆ ಆಧಾರಿತ ಲಾಗಿನ್ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಈ ಸಲದ ಪ್ರವೇಶ ಪತ್ರದಲ್ಲಿ ಪ್ರಮುಖವಾಗಿ ಕ್ಯೂಆರ್ ಕೋಡ್ ಇದೆ. ಜತೆಗೆ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ಮಾದರಿ ಒಎಂಆರ್ ಶೀಟ್ ಹಾಗೂ ಮಾರ್ಗಸೂಚಿ ಪಟ್ಟಿ ಸೇರಿ ಎರಡು ಪುಟಗಳನ್ನು ಡೌನ್‌ಲೊಡ್ ಮಾಡಿಕೊಂಡು ಓದಿಕೊಳ್ಳಬಹುದು. ಮಾದರಿ ಓಎಂಆರ್ ಶೀಟ್ ಅನ್ನು ವಿದ್ಯಾರ್ಥಿಗಳು ಅಭ್ಯಾಸಕ್ಕೂ ಬಳಸಿಕೊಳ್ಳಬಹುದು. ಈ ಮೂಲಕ ಪರೀಕ್ಷೆ ಸಂದರ್ಭದಲ್ಲಿ ಆಗುವ ತಪ್ಪುಗಳನ್ನು ತಪ್ಪಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಏ.15ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಏ.16ರಂದು ಭೌತಶಾಸ, ರಾಸಾಯನಶಾಸ, ಏ.17ರಂದು ಗಣಿತ ಮತ್ತು ಜೀವಶಾಸ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ 3,30,875 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇಷ್ಟೂ ಮಂದಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅರ್ಹತೆ ಹೊಂದಿದ್ದಾರೆ.